ಸ್ಯಾಂಡಲ್‌ವುಡ್ ಡ್ರಗ್ಸ್ : ನಿರೂಪಕ ಅಕುಲ್ ಬಾಲಾಜಿಗೆ ಸಿಸಿಬಿ ನೋಟಿಸ್

0
185
Tap to know MORE!

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನಿರೂಪಕ ಅಕುಲ್ ಬಾಲಾಜಿ ಸೇರಿದಂತೆ ಮೂವರಿಗೆ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.

ಅಕುಲ್ ಸೇರಿದಂತೆ ಮಾಜಿ ಶಾಸಕ ಆರ್.ವಿ ದೇವರಾಜ್ ಮಗ ಯುವರಾಜ್ ಆರ್.ವಿ ಹಾಗೂ ಬಿಗ್ ಬಾಸ್ ಸ್ಪರ್ಧಿ ಸಂತೋಷ್ ಕುಮಾರ್‌ಗೆ ನಾಳೆ ಬೆಳಗ್ಗೆ 10 ಗಂಟೆಗೆ ವಿಚಾರಣೆ ಹಾಜರಾಗುವಂತೆ ನೋಟಿಸ್ ನೀಡಿದೆ.

ಐಂದ್ರಿತಾ ರೇ, ದಿಗಂತ್‌ಗೂ ಸಿಸಿಬಿ ನೋಟಿಸ್

ಸದ್ಯ ಹೈದರಾಬಾದ್ ನಲ್ಲಿರುವ ಅಕುಲ್ ಬಾಲಾಜಿ, ನಾಳೆ ವಿಚಾರಣೆಗೆ ಹಾಜರಾಗಲು ತಿಳಿಸಿದ್ದಾರೆ. ಹೀಗಾಗಿ ನಾಳೆ ಬೆಳಗ್ಗೆ ವಿಚಾರಣೆಗೆ ಬರುತ್ತೇನೆ ಎಂದು ಹೇಳಿದ್ದಾರೆ.

ದೊಡ್ಡ ಬಳ್ಳಾಪುರ ತಾಲೂಕಿನ ಲಗುಮೇನಹಳ್ಳಿ ಗ್ರಾಮದಲ್ಲಿ ಅಕುಲ್ ಬಾಲಾಜಿ ಒಡೆತನದ ಸನ್ ಶೈನ್ ಎಂಬ ರೆಸಾರ್ಟ್ ಇದೆ. ಲಾಕ್ ಡೌನ್ ಅವಧಿಯಲ್ಲಿ ಈ ರೆಸಾರ್ಟ್ ನಲ್ಲಿ ಕಾನೂನು ಉಲ್ಲಂಘನೆ ನಡೆಸಿ ಕಾರ್ಯಕ್ರಮ ನಡೆಸಿದ್ದಕ್ಕೆ ಎಫ್‍ಐಆರ್ ಕೂಡ ದಾಖಲಾಗಿತ್ತು.
ಅಲ್ಲದೆ ವಿರೇನ್ ಖನ್ನಾಗೆ ಅಕುಲ್ 3 ಬಾರಿ ಈ ರೆಸಾರ್ಟ್ ಬಾಡಿಗೆಗೆ ನೀಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟಿ ರಾಗಿಣಿ ಹಾಗೂ ಸಂಜನಾ ಗಲ್ರಾನಿ ಪರಪ್ಪನ ಅಗ್ರಹಾರ ಸೇರಿದ್ದಾರೆ. ಸಂಜನಾ ನ್ಯಾಯಾಂಗ ಬಂಧನ ಇಂದು ಮುಕ್ತಾಯವಾಗುತ್ತಿದ್ದು, ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆಯಾಗಿದೆ. ನಾಳೆ ರಾಗಿಣಿಯ ಜಾಮೀನು ಅರ್ಜಿ ವಿಚಾರಣೆಯೂ ಇದೆ.

ಇತ್ತ ನಟಿ ದಿಗಂತ್ ಹಾಗೂ ನಟಿ ಐಂದ್ರಿತಾ ಅವರನ್ನು ಕೂಡ ಸಿಸಿಬಿ ವಿಚಾರಣೆ ನಡೆಸಿ ವಾಪಸ್ ಕಳುಹಿಸಿತ್ತು. ಅಲ್ಲದೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಈ ಟೆನ್ಶನ್ ನಡುವೆಯೂ ಶೂಟಿಂಗ್ ಗೆ ಹೋಗುವುದಾಗಿ ಗಂಡ-ಹೆಂಡತಿ ನಿನ್ನೆ ಹೇಳಿದ್ದರು. ಆದರೆ ಕೊನೆ ಘಳಿಗೆಯಲ್ಲಿ ಬ್ರೇಕ್ ಪಡೆದು ಪೋಸ್ಟ್ ಪೋನ್ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.

LEAVE A REPLY

Please enter your comment!
Please enter your name here