ಅಕ್ಟೋಬರ್ ತಿಂಗಳಿನಿಂದ ಎಲ್ಲಾ ವಿವಿಗಳ ಹೊಸ ಶೈಕ್ಷಣಿಕ ವರ್ಷ ಆರಂಭ: ಡಿಸಿಎಂ

0
175
Tap to know MORE!

ಬೆಂಗಳೂರು : ಅಕ್ಟೋಬರ್‌ ಮೊದಲ ವಾರದಲ್ಲಿ ಈ ವರ್ಷದ ಶೈಕ್ಷಣಿಕ ವರ್ಷದ ಚಟುವಟಿಕೆಗಳು ಆರಂಭವಾಗುತ್ತವೆ. ಮೊದಲ ವರ್ಷದ ಪದವಿಗೆ ಅಕ್ಟೋಬರ್‌ ಮೊದಲ ವಾರದಿಂದಲೇ ದಾಖಲಾತಿ ಆರಂಭ ಮಾಡುವಂತೆ ಕುಲಪತಿಗಳಿಗೆ ತಿಳಿಸಲಾಗಿದೆ ಎಂದರು ಡಿಸಿಎಂ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥ ನಾರಾಯಣ ಘೋಷಿಸಿದ್ದಾರೆ.

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಶಿಫಾರಸಿನಂತೆ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಪದವಿ ಕೋರ್ಸುಗಳನ್ನು ಆರಂಭ ಮಾಡುವಂತೆ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಕುಲಪತಿಗಳಿಗೆ ಸಲಹೆ ಮಾಡಿದ್ದಾರೆ.

2021-22ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಎಲ್ಲ ಕುಲಪತಿಗಳ ಜತೆ ಬೆಂಗಳೂರಿನಲ್ಲಿ ಮಂಗಳವಾರ ವರ್ಚುಯಲ್‌ ಚರ್ಚೆ ನಡೆಸಿದ ನಂತರ ಡಿಸಿಎಂ ಅವರು ಮಾಧ್ಯಮಗಳಿಗೆ ಈ ಮಾಹಿತಿ ನೀಡಿದರು.

ಮತ್ತೆ ಅಧಿಕಾರಕ್ಕೆ ಬಂದರೆ, ಆರ್ಟಿಕಲ್ 370 ಯನ್ನು ಪುನಃ ಜಾರಿಗೆ ತರಲಾಗುವುದು: ದಿಗ್ವಿಜಯ್ ಸಿಂಗ್

ಕೋವಿಡ್‌ ಕಾರಣಕ್ಕೆ ಪ್ರಸಕ್ತ ವರ್ಷದಲ್ಲಿ ಪಿಯುಸಿ ವಿದ್ಯಾರ್ಥಿಗಳೆಲ್ಲರೂ ಪಾಸಾಗಿದ್ದಾರೆ. ವಿವಿಧ ಕೋರ್ಸುಗಳಿಗೆ ಬಹಳ ಬೇಡಿಕೆ ಬರುತ್ತಿದೆ. ವಿವಿಗಳಿಗೆ ಇದೊಂದು ಸುವರ್ಣಾವಕಾಶ. ನಾಲ್ಕು ವರ್ಷದ ಪದವಿ ತರಗತಿಗಳನ್ನು ಆರಂಭ ಮಾಡುವ ಮೂಲಕ ವಿವಿಗಳು ಪದವಿ ವ್ಯಾಸಂಗದ ಅಭಿಲಾಶೆಯುಳ್ಳ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಲು ಕುಲಪತಿಗಳಿಗೆ ಸೂಚಿಸಲಾಗಿದೆ ಎಂದರು.

ಸದ್ಯಕ್ಕೆ ನಮ್ಮನ್ನು ಕಾಡುತ್ತಿರುವ ಈ ವೈರಸ್‌ ಎಷ್ಟು ಕಾಲ ಇರುತ್ತೋ ಇಲ್ಲವೋ ಗೊತ್ತಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಆನ್‌ಲೈನ್‌ ಮತ್ತು ಆಫ್ ಲೈನ್‌ ನಲ್ಲಿ ಕಲಿಯಲು ಅವಕಾಶ ಇರಲೇಬೇಕು. ಅದಕ್ಕೆ ಬೇಕಾದ ಎಲ್ಲ ತಾಂತ್ರಿಕ ಸೌಲಭ್ಯಗಳು ವಿದ್ಯಾಸಂಸ್ಥೆಗಳಲ್ಲಿ ಇರಬೇಕು. ಡಿಜಿಟಲ್‌ನಿಂದ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ವರ್ಚಯುಲ್‌ ಮೂಲಕ ಬೋಧನೆ ಮಾಡುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಅಕ್ಟೋಬರ್‌ನಿಂದ ಹೊಸ ಶೈಕ್ಷಣಿಕ ವರ್ಷ

ಎಲ್ಲ ವಿವಿಗಳ 2021-22ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಅಕ್ಟೋಬರ್‌ ಮೊದಲ ವಾರದಲ್ಲಿ ಈ ವರ್ಷದ ಶೈಕ್ಷಣಿಕ ವರ್ಷದ ಚಟುವಟಿಕೆಗಳು ಆರಂಭವಾಗುತ್ತವೆ. ಮೊದಲ ವರ್ಷದ ಪದವಿಗೆ ಅಕ್ಟೋಬರ್‌ ಮೊದಲ ವಾರದಿಂದಲೇ ದಾಖಲಾತಿ ಆರಂಭ ಮಾಡುವಂತೆ ಕುಲಪತಿಗಳಿಗೆ ತಿಳಿಸಲಾಗಿದೆ ಎಂದರು ಡಿಸಿಎಂ.

ಕೆಲ ಕಡೆ ಪರೀಕ್ಷೆಗಳು ನಡೆದಿವೆ, ಇನ್ನು ಕೆಲವೆಡೆ ಆಗಿಲ್ಲ. ಈ ಬಗ್ಗೆ ಕೂಡ ಚರ್ಚೆ ನಡೆಸಲಾಯಿತು. ಇನ್ನು ಈಗಾಗಲೇ ದೈನಂದಿನ ತರಗತಿಗಳು ಶುರುವಾಗಿದ್ದು, ಅವುಗಳನ್ನು ಕೂಡ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಆಧಾರದಲ್ಲೇ ನಡೆಸಲಾಗುವುದು ಎಂದ ಅವರು, ಮುಂದಿನ ವರ್ಷದ ಪರೀಕ್ಷೆಗಳನ್ನು ಹೇಗೆ ನಡೆಸಬೇಕು ಹಾಗೂ ಗುಣಮಟ್ಟದ ಶಿಕ್ಷಣ ನೀಡಲು ಏನೆಲ್ಲ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ವಿವರವಾಗಿ ಚರ್ಚಿಸಲಾಯಿತು. ಜಾಗತಿಕ ಮಟ್ಟದಲ್ಲಿ ವಿದ್ಯಾರ್ಥಿಗಳು ಪೈಪೋಟಿ ನಡೆಸಬೇಕಾದರೆ ಕಲಿಕೆ ಮತ್ತು ಬೋಧನೆಯಲ್ಲಿ ಗುಣಮಟ್ಟ ಇರಬೇಕು ಎಂಬ ಬಗ್ಗೆ ವಿಸ್ತೃತವಾಗಿ ಸಮಾಲೋಚನೆ ನಡೆಸಲಾಯಿತು ಎಂದರು.

LEAVE A REPLY

Please enter your comment!
Please enter your name here