ಮುಂದಿನ 5 ವರ್ಷಗಳಲ್ಲಿ ಬಿಜೆಪಿಯು ತಮಿಳುನಾಡಿನಲ್ಲಿ ಬದಲಾವಣೆ ತರದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಅಣ್ಣಾಮಲೈ

0
471
Tap to know MORE!

ಚೆನ್ನೈ: “ನಾವು ತಯಾರಾಗಿದ್ದೇವೆ. ಮುಂದಿನ 5 ವರ್ಷಗಳಲ್ಲಿ ತಮಿಳುನಾಡು ಬಿಜೆಪಿ ರಾಜ್ಯದಲ್ಲಿ ಧನಾತ್ಮಕ ಬದಲಾವಣೆಯನ್ನು ತರದಿದ್ದರೆ, ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ” ಎಂದು ತಮಿಳುನಾಡು ಬಿಜೆಪಿ ಉಪಾಧ್ಯಕ್ಷ, ಮಾಜಿ ಐಪಿಎಸ್ ಅಣ್ಣಾಮಲೈ ಸವಾಲು ಹಾಕಿದ್ದಾರೆ.

“ನಾನು 2026 ರವರೆಗೆ ನಿಮಗೆ ಪ್ರತ್ಯುತ್ತರಿಸುವುದಿಲ್ಲ. ನಾನು ಸಮಾಜದಲ್ಲಿ ನನ್ನ ಕೆಲಸ ಕಾರ್ಯಗಳ ಮೂಲಕ ಧನಾತ್ಮಕ ಬದಲಾವಣೆ ತರುವ ಸಾಮಾನ್ಯ ಮನುಷ್ಯ. ಮುಂದಿನ ಐದು ವರ್ಷಗಳಲ್ಲಿ ನಾನು ಹೇಳಿರುವುದನ್ನು ಮಾಡಿ ತೋರಿಸದಿದ್ದರೆ, ನಾನು ರಾಜಕೀಯವನ್ನು ತೊರೆಯುತ್ತೇನೆ” ಎಂದು ಟ್ವಿಟ್ಟರ್‌ನಲ್ಲಿ ಸವಾಲು ಎಸಗಿದ್ದಾರೆ.

ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ ಅವರು ತಮಿಳುನಾಡಿನ ಅರಾವಕುರಿಚಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಡಿಎಂಕೆ ಅಭ್ಯರ್ಥಿ ವಿರುದ್ಧ ಸೋಲು ಅನುಭವಿಸಿದ್ದರು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಈ ಫಲಿತಾಂಶದ ಕುರಿತು ಟ್ವೀಟ್‌ ಮಾಡಿರುವ ಅವರು, ‘ಸೋಲುಗಳು ಜೀವನದ ಒಂದು ಭಾಗವಾಗಿದ್ದು, ಇಂತಹ ಹಲವು ಸೋಲುಗಳನ್ನು ನೋಡಿದ್ದೇನೆ. ಗೆಲುವಿನ ನಿರೀಕ್ಷೆ ಇತ್ತು. ಆದರೆ, ಅದು ಸಾಧ್ಯವಾಗಿಲ್ಲ’ ಎಂದಿದ್ದಾರೆ.

ಅರಾವಕುರಿಚಿ ವಿಧಾನಸಭಾ ಕ್ಷೇತ್ರದಲ್ಲಿ ನನಗೆ 68 ಸಾವಿರಕ್ಕೂ ಹೆಚ್ಚು ಮತಗಳನ್ನು ನೀಡಿದ ಮತದಾರರಿಗೆ ನನ್ನ ಧನ್ಯವಾದಗಳು ಎಂದಿದ್ದಾರೆ. ನನ್ನ ಪರವಾಗಿ ಶ್ರಮಿಸಿದ ಪಕ್ಷದ ಹಿರಿಯರಿಗೂ, ಕಾರ್ಯಕರ್ತರಿಗೆ ಧನ್ಯವಾದ ತಿಳಿಸುವುದಾಗಿ ಅಣ್ಣಾಮಲೈ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here