ತಮಿಳುನಾಡು ಬಿಜೆಪಿ ಉಪಾಧ್ಯಕ್ಷರಾಗಿದ್ದ ಅಣ್ಣಾಮಲೈ ಈಗ ಅಧ್ಯಕ್ಷರಾಗಿ ನೇಮಕ

0
188
Tap to know MORE!

ಚೆನ್ನೈ: ಕಳೆದ ವರ್ಷವಷ್ಟೇ ನಿವೃತ್ತ ಪೊಲೀಸ್ ಅಧಿಕಾರಿ ಕೆ. ಅಣ್ಣಾಮಲೈ ಪೊಲೀಸ್ ಹುದ್ದೆ ತೊರೆದು ರಾಜಕೀಯ ರಂಗ ಪ್ರವೇಶಿಸಿದ್ದರು. ಕಳೆದ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದರು. ಆದರೂ, ಕರ್ನಾಟಕದಲ್ಲಿ ಜನಪ್ರಿಯ ಪೊಲೀಸ್ ಅಧಿಕಾರಿಯಾಗಿದ್ದ ಅಣ್ಣಾಮಲೈಗೆ ಬಿಜೆಪಿ ಮಹತ್ವದ ಹುದ್ದೆ ನೀಡಿದೆ. ತಮಿಳುನಾಡು ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

ತಮಿಳುನಾಡಿನ ಕರೂರು ಮೂಲದ ಕೆ ಅಣ್ಣಾಮಲೈರನ್ನು ಚುನಾವಣೆಗೂ ಮುನ್ನ ತಮಿಳುನಾಡು ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಈಗ ಹಾಲಿ ಅಧ್ಯಕ್ಷ ಡಾ ಲೋಗನಾಥನ್ ಮುರಗನ್ ಅವರು ಮೋದಿ ಸಚಿವ ಸಂಪುಟ ಸೇರಿದ್ದರಿಂದ ಅಣ್ಣಾಮಲೈಗೆ ಅಧ್ಯಕ್ಷ ಸ್ಥಾನ ಒಲಿದು ಬಂದಿದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ವಾರ್ತಾ ಮತ್ತು ಪ್ರಸಾರ ಖಾತೆಯ ಸಹಾಯಕ ಸಚಿವರಾಗಿ ಡಾ. ಲೋಗನಾಥನ್ ಮುರುಗನ್ ಅವರಿಂದು ವಾರ್ತಾ ಮತ್ತು ಪ್ರಸಾರ ಸಚಿವರಾದ ಶ್ರೀ ಅನುರಾಗ್ ಠಾಕೂರ್ ಅವರ ಸಮಕ್ಷಮದಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ. ಪ್ರಧಾನ ಮಂತ್ರಿ ಅವರು ತಮ್ಮ ಸಂಪುಟದಲ್ಲಿ ತಮಿಳುನಾಡಿಗೆ ಸಾಕಷ್ಟು ಪ್ರಾತಿನಿಧ್ಯ ನೀಡಿರುವುದಕ್ಕಾಗಿ ಪ್ರಧಾನ ಮಂತ್ರಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here