ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲು!

0
356
Tap to know MORE!

ಚೆನ್ನೈ: ಇತ್ತೀಚೆಗಷ್ಟೇ ಬಿಜೆಪಿ ಸೇರಿರುವ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ವಿರುದ್ಧ ಇಂದು ದೂರು ದಾಖಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ದೂರು ದಾಖಲಾಗಿದೆ.

ಅಣ್ಣಾಮಲೈ ಅವರು ಕೋವಿಡ್-19 ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿ ತಮಿಳುನಾಡಿನ ಕೊಯಮತ್ತೂರಿನಲ್ಲಿ ಸಭೆ ನಡೆಸಿದ್ದಾರೆ. ಈ ದೂರಿನ ಅನ್ವಯ, ಕೊಯಮತ್ತೂರು ನಗರ ಠಾಣಾ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಬಿಜೆಪಿ ರಾಷ್ಟ್ರೀಯವಾದಿ ಪಕ್ಷ ಮತ್ತು ನಾನೂ ಒಬ್ಬ ರಾಷ್ಟ್ರೀಯವಾದಿ : ಅಣ್ಣಾಮಲೈ

ಬಿಜೆಪಿ ಸೇರಿದ ಬಳಿಕ ವಿಕೆಕೆ ಮೆನನ್ ರಸ್ತೆಯಲ್ಲಿರುವ ಬಿಜೆಪಿ ಕಚೇರಿಗೆ ಗುರುವಾರ ಅಣ್ಣಾಮಲೈ ಭೇಟಿ ನೀಡಿದ್ದು, ಬಹಳಷ್ಟು ಕಾರ್ಯಕರ್ತರು ಕಚೇರಿಯಲ್ಲಿ ಸೇರಿ ಅವರನ್ನು ಅಭಿನಂದಿಸಿದ್ದರು. ಅದಲ್ಲದೆ, ಅವರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು. ಅಣ್ಣಾಮಲೈ ಅವರು ವಾಹನದಿಂದಲೇ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದರು.

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸುಗನ್ಯಾ ಅವರು ಈ ಕುರಿತು ದೂರು ನೀಡಿದ್ದಾರೆ. ಕೆ. ಅಣ್ಣಾಮಲೈ, ಬಿಜೆಪಿ ಜಿಲ್ಲಾಧ್ಯಕ್ಷ ಆರ್. ನಂದಕುಮಾರ್ ಮತ್ತು ಬಿಜೆಪಿ ನಾಯಕರಾದ ಜಿಕೆಎಸ್ ಸೆಲ್ವಕುಮಾರ್ ಮುಂತಾದವರ ವಿರುದ್ಧ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here