ಚೆನ್ನೈ : ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ಘಟಕದ ಉಪಾಧ್ಯಕ್ಷರನ್ನಾಗಿ ಶನಿವಾರ ನೇಮಿಸಲಾಗಿದೆ. ಆಗಸ್ಟ್ 25 ರಂದು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ. ಮುರಳೀಧರ ರಾವ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಎಲ್ ಮುರುಗನ್ ಅವರ ಸಮ್ಮುಖದಲ್ಲಿ ಔಪಚಾರಿಕವಾಗಿ ತಮಿಳುನಾಡು ಬಿಜೆಪಿ ಘಟಕಕ್ಕೆ ಸೇರಿದರು.
ಶನಿವಾರ, ತಮಿಳುನಾಡು ಬಿಜೆಪಿ ರಾಜ್ಯ ಅಧ್ಯಕ್ಷ ಎಲ್ ಮುರುಗನ್, “ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಭವಿಷ್ಯದಲ್ಲಿ ನಿಮ್ಮ ಯಶಸ್ಸನ್ನು ನಾನು ಬಯಸುತ್ತೇನೆ” ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.