ಅನ್ಲಾಕ್ ನಿಯಮಗಳನ್ನು ಇನ್ನಷ್ಟು ಸಡಿಲಿಸಿದ ರಾಜ್ಯ ಸರ್ಕಾರ | ದೇಗುಲಗಳು, ಮಾಲ್‌ಗಳನ್ನು ತೆರೆಯಲು ಅನುಮತಿ

0
359
Tap to know MORE!

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೂರನೇ ಹಂತದ ಅನ್​ಲಾಕ್​​ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅನ್‌ಲಾಕ್‌ 3.O ಜಾರಿಗೊಳಿಸಲಾಗುವುದು ಎಂದು ತಿಳಿಸಲಾಗಿದೆ. ಜುಲೈ 5ರ ಮುಂಜಾನೆ 5 ಗಂಟೆಯಿಂದ ಜುಲೈ 19ರ ಬೆಳಿಗ್ಗೆ ವರೆಗೆ ಅನ್​ಲಾಕ್ 3.O ಅನ್ವಯವಾಗಲಿದೆ.

ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಶೇ.100ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. ಎಲ್ಲಾ ಮಾಲ್‌ಗಳು ಓಪನ್ ಮಾಡಲು ಅವಕಾಶ ನೀಡಲಾಗಿದೆ. ರಾಜ್ಯದಲ್ಲಿ ದೇವಾಲಯಗಳನ್ನು ತೆರೆಯುವ ಬಗ್ಗೆ ಕೆಲವು ನಿರ್ಬಂಧಗಳೊಂದಿಗೆ ಅವಕಾಶ ನೀಡಲಾಗಿದೆ. ಭಕ್ತರಿಗೆ ದೇವಾಲಯ ಪ್ರವೇಶ, ದೇವರ ದರ್ಶನ ಮತ್ತು ಆರತಿ ಸೇವೆಗಷ್ಟೇ ಅವಕಾಶ ಮಾಡಿಕೊಡಲಾಗಿದೆ.

ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಮಾಜಿ ಸಚಿವ ಅಭಯಚಂದ್ರ ಜೈನ್!

ಮಾರ್ಗಸೂಚಿ ಹೈಲೈಟ್ಸ್:

  • ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಶೇ.100ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ
  • ನಿರ್ಬಂಧಗಳೊಂದಿಗೆ ದೇವಾಲಯಗಳು ಓಪನ್ – ಭಕ್ತರ ಪ್ರವೇಶ, ಪೂಜೆ, ದರ್ಶನ ಸೇವೆಗೆ ಮಾತ್ರ ಅನುಮತಿ
  • ಬಾರ್​ಗಳು ಕಾರ್ಯ ನಿರ್ವಹಿಸಲು ಅವಕಾಶ
  • ಪೂರ್ಣ ಪ್ರಮಾಣದಲ್ಲಿ ಬಸ್, ಮೆಟ್ರೋ ಸಂಚಾರಕ್ಕೆ ಅನುಮತಿ
  • ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ.
  • ಮದುವೆ ಸಮಾರಂಭಕ್ಕೆ 100 ಜನ, ಅಂತ್ಯ ಸಂಸ್ಕಾರಕ್ಕೆ 20 ಜನರ ಮಿತಿ
  • ನೈಟ್ ಕರ್ಫ್ಯೂ ಹಾಗೂ ವೀಕೆಂಡ್‌ ಕರ್ಫ್ಯೂ ಜಾರಿಯಲ್ಲಿ ಇರುವುದಿಲ್ಲ.
  • ಧಾರ್ಮಿಕ, ರಾಜಕೀಯ ಇತರ ಸಮಾರಂಭಗಳಿಗೆ ಅವಕಾಶ ಇರುವುದಿಲ್ಲ.
  • ಪಬ್​ಗಳು ಕಾರ್ಯನಿರ್ವಹಿಸಲು ಅವಕಾಶ ಇಲ್ಲ
  • ಸಿನಿಮಾ ಹಾಲ್​ಗಳು ತೆರೆಯಲು ಅವಕಾಶ ನೀಡಲಾಗಿಲ್ಲ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

“ಜಯ ಯಾರಿಗೆ ಎಂದು ನೋಡೇ ಬಿಡೋಣ” – ಪಬ್ಲಿಕ್ ಟಿವಿ‌ಗೆ ಬಹಿರಂಗ ಸವಾಲು ಹಾಕಿದ ರಕ್ಷಿತ್ ಶೆಟ್ಟಿ

ಕೊರೊನಾ ಎರಡನೇ ಅಲೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಇಳಿಕೆಯಾಗಿದೆ. ಪಾಸಿಟಿವಿಟಿ ದರ ಕೂಡ ಕಡಿಮೆ ಆಗಿದೆ. ಕೊವಿಡ್-19 ಎರಡನೇ ಅಲೆ ಆತಂಕ ಕಡಿಮೆಯಾಗುತ್ತಿರುವಂತೆ ಲಾಕ್​ಡೌನ್ ನಿಯಮಾವಳಿಗಳನ್ನು ಹಂತಹಂತವಾಗಿ ಸಡಿಲಿಕೆ ಮಾಡಲಾಗುತ್ತಿದೆ. ಜೂನ್ 14ರಂದು ಮೊದಲ ಅನ್​ಲಾಕ್ ಘೋಷಿಸಲಾಗಿತ್ತು. ಆ ಬಳಿಕ, ಜೂನ್ 21ರಂದು ಮತ್ತೊಂದು ಹಂತದ ಲಾಕ್​ಡೌನ್ ಸಡಿಲಿಕೆ ಮಾಡಲಾಗಿತ್ತು. ಇಂದು (ಜುಲೈ 3) ಮೂರನೇ ಹಂತದ ಅನ್​ಲಾಕ್ ಘೋಷಿಸಲಾಗಿದೆ. ಜೂನ್ 5 ಅಂದರೆ ಸೋಮವಾರದಿಂದ ಈ ನಿಯಮಾವಳಿಗಳು ಜಾರಿಗೆ ಬರಲಿದೆ.

LEAVE A REPLY

Please enter your comment!
Please enter your name here