ಅಮಿತ್ ಶಾ ಬಳಿಕ ಇದೀಗ ಬಿಎಸ್‌ವೈಗೂ ಕೊರೋನಾ!

0
182
Tap to know MORE!

ಕೊರೊನಾವೈರಸ್ ಸೋಂಕಿಗೆ ಒಳಗಾಗಿರುವ ಬಗ್ಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಸಂಜೆ ಪ್ರಕಟಿಸಿದ್ದರು.

ಕಳೆದ ಬುಧವಾರ ನಡೆದ ಸಚಿವ ಸಂಪುಟದ ಪ್ರಮುಖ ಸಭೆಯಲ್ಲಿ ಗೃಹ ಸಚಿವರು ಭಾಗವಹಿಸಿದ್ದರು. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ, ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ಮತ್ತು ಹಲವಾರು ಉನ್ನತ ಸಚಿವರು ಉಪಸ್ಥಿತರಿದ್ದರು. ಸಭೆಯ ನಂತರ, ಸರ್ಕಾರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಘೋಷಿಸಿತ್ತು.

ಕೇಂದ್ರ ಗೃಹ ಸಚಿವರನ್ನು ಗುರ್ಗಾಂವ್ ನ ಮೆಡಂತ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ

ದೆಹಲಿಯ ಆಸ್ಪತ್ರೆಗಳು ಮತ್ತು ಕೋವಿಡ್ -19 ಕೇಂದ್ರಗಳಿಗೆ ಶಾ ಸತತವಾಗಿ ಭೇಟಿ ನೀಡುತ್ತಿದ್ದರು. ಇವರು ಕೊರೋನಾ ಸೋಂಕಿಗೆ ಒಳಗಾಗಿರುವ, ಕೇಂದ್ರ ಸಚಿವ ಸಂಪುಟದ ಮೊದಲ ಸದಸ್ಯ!!

ಷಾ ಅವರಲ್ಲದೆ, ಕರ್ನಾಟಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಕೂಡ ಭಾನುವಾರ ವೈರಸ್‌ಗೆ ಇರುವುದು ದೃಢಪಟ್ಟಿದೆ.

“ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ”ಎಂದು ಯಡಿಯೂರಪ್ಪ ಭಾನುವಾರ ತಡರಾತ್ರಿ ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here