ನವದೆಹಲಿ, ಡಿ 25 : ನರೇಂದ್ರ ಮೋದಿ ಪ್ರಧಾನ ಮಂತ್ರಿಯಾಗಿರುವವರೆಗೆ ಯಾವುದೇ ಕಾರ್ಪೊರೇಟ್ ಸಂಸ್ಥೆಗಳು ರೈತರ ಭೂಮಿಗಳನ್ನು ಕಸಿಯಲು ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.
ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ವ್ಯವಸ್ಥೆ ಮುಂದುವರಿಯಲಿದೆ. ಮಂಡಿಗಳನ್ನು ಮುಚ್ಚಲು ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಅವರು ಭರವಸೆ ನೀಡಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಅಂಗವಾಗಿ ದೆಹಲಿಯ ಕಿಶನ್ ಬಾಗ್ ನಲ್ಲಿ ಬಿಜೆಪಿ ಆಯೋಜಿಸಿದ್ದ ರೈತೋತ್ಸವ ದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳಲ್ಲಿ ಯಾವುದೇ ನಿಬಂಧನೆ ರೈತರಿಗೆ ಹಿತಾಸಕ್ತಿಗೆ ವಿರುದ್ದ ಎಂದು ಕಂಡುಬಂದರೆ ರೈತರೊಂದಿಗೆ ಚರ್ಚಿಸಲು ಮೋದಿ ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದರು.
ಇದನ್ನೂ ಓದಿ: ಕೃಷಿ ಕಾಯ್ದೆಗಳ ಕುರಿತು ಮಾಹಿತಿ ನೀಡಲು ಬಿಜೆಪಿಯಿಂದ ದೇಶವ್ಯಾಪಿ “ರೈತ ಜಾಗೃತಿ ಯಾತ್ರೆ”
ಕೃಷಿ ಕಾಯ್ದೆಗಳ ಕುರಿತು ಪ್ರತಿಪಕ್ಷಗಳು ಸಂಪೂರ್ಣ ಸುಳ್ಳುಗಳನ್ನು ಹರಡುತ್ತಿವೆ. ಕನಿಷ್ಠ ಬೆಂಬಲ ಬೆಲೆ ಮುಂದುವರಿಯಲಿದೆ. ಮಂಡಿಗಳು ಮುಚ್ಚುವುದಲ್ಲ ಎಂದು ಮತ್ತೊಮ್ಮೆ ಭರವಸೆ ನೀಡುವುದಾಗಿ ಹೇಳಿದರು. ಕೃಷಿ ಕಾಯ್ದೆಗಳ ಬಗ್ಗೆ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಅಪ ಪ್ರಚಾರ ನಡೆಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ರೈತರ ಕಲ್ಯಾಣವೇ ನರೇಂದ್ರ ಮೋದಿ ಸರ್ಕಾರದ ಮುಖ್ಯ ಉದ್ದೇಶವಾಗಿದೆ ”ಎಂದು ಶಾ ಹೇಳಿದರು. ಕೃಷಿ ಉತ್ಪನ್ನಗಳಿಗೆ ಕನಿಷ್ಟ ಬೆಂಬಲ ಬೆಲೆಯನ್ನು ಒಂದೂವರೆ ಪಟ್ಟು ಹೆಚ್ಚು ನೀಡಬೇಕು ಎಂಬ ಬೇಡಿಕೆಯನ್ನು ಪರಿಗಣಿಸಿದ ಮೋದಿ ಸರ್ಕಾರ 2014- 19ರ ನಡುವೆ ಜಾರಿಗೆ ತಂದಿದೆ ಎಂದು ಶಾ ವಿವರಿಸಿದರು.
ಸುದ್ದಿಗಳನ್ನು ವಾಟ್ಸಾಪ್ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ
ಸಾಲ ಮಂಜೂರು ಮಾಡುವ ಅನಧಿಕೃತ ಮೊಬೈಲ್ ಆ್ಯಪ್ಗಳ ಬಗ್ಗೆ ಎಚ್ಚರವಿರಲಿ : RBI