ಲಸಿಕೆ ಪಡೆದವರು ಮಾಸ್ಕ್ ಧರಿಸುವ ಅವಶ್ಯಕತೆಯಿಲ್ಲ: ಅಮೇರಿಕಾ ಅಧ್ಯಕ್ಷ ಬೈಡನ್ ಘೋಷಣೆ

0
4234
Tap to know MORE!

ವಾಷಿಂಗ್ಟನ್: ಅಮೆರಿಕಾ ಅತೀ ಬೇಗ ಸಹಜ ಸ್ಥಿತಿಯತ್ತ ಮರಳುತ್ತಿದ್ದು, ಲಸಿಕೆ ಪಡೆದವರು ಮಾಸ್ಕ್ ಧರಿಸುವ ಅಗತ್ಯವಿಲ್ಲ ಎಂದು ಅಮೇರಿಕಾ ಅಧ್ಯಕ್ಷ ಜೋ ಬೈಡನ್ ಅವರು ಹೇಳಿದ್ದಾರೆ.

ಸಂಪೂರ್ಣವಾಗಿ ಲಸಿಕೆ ಹಾಕಿಸಿಕೊಂಡ ಜನರು ಇನ್ನು ಮುಂದೆ ಮಾಸ್ಕ್ ಧರಿಸುವ ಅಗತ್ಯವಿಲ್ಲ ಎಂದು ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರ (ಸಿಡಿಸಿ) ಹೇಳಿದ್ದು, ಈ ಕುರಿತ ಘೋಷಣೆಯಾಗುತ್ತಿದ್ದಂತೆಯೇ ವೈಟ್ ಹೌಸ್’ನ ರೋಸ್ ಗಾರ್ಡನ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಹಾಗೂ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಮಾಸ್ಕ್ ಧರಿಸದೇ ಭಾಗವಹಿಸಿದರು.

ಮುಂದಿನ ವಾರದಿಂದ ಕೋವಿಡ್ ಲಸಿಕೆ ಸ್ಪುಟ್ನಿಕ್ V ಮಾರುಕಟ್ಟೆಯಲ್ಲಿ ಲಭ್ಯ

ಬಳಿಕ ಮಾತನಾಡಿದ ಬೈಡನ್ ಅವರು, ಇದೊಂದು ಅದ್ಭುತ ಮೈಲಿಗಲ್ಲು ಎಂದು ನಾನು ಭಾವಿಸುತ್ತೇನೆ. ಅಸಮಾನ್ಯ ಸಾಧನೆಯಿಂದ ಇದು ಸಾಧ್ಯವಾಗಿದೆ, ಅತೀ ವೇಗವಾಗಿ ಅಮೆರಿಕನ್ನರಿಗೆ ನಾವು ಲಸಿಕೆ ನೀಡುತ್ತಿದ್ದೇವೆ ಎಂದು ಹೇಳಿದರು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಇದೇ ವೇಳೆ ಸಿಡಿಸಿಯ ಹೊರಡಸಿದ ಮಾರ್ಗಸೂಚಿಗಳನ್ನು ತಿಳಿಸಿದ ಅವರು, ಎರಡೂ ಡೋಸ್ ಲಸಿಕೆ ಪಡೆದವರಿಗೆ ಸೋಂಕು ತಗುಲುವುದು ವಿರಳಾತಿವಿರಳ. ಹೀಗಾಗಿ ನೀವು ಎರಡೂ ಡೋಸ್ ಲಸಿಕೆ ಪಡೆದಿದ್ದರೆ ಇನ್ನು ಮುಂದೆ ಮಾಸ್ಕ್ ಧರಿಸುವ ಅಗತ್ಯವಿಲ್ಲ. ಆದರೆ ಒಂದು ಡೋಸ್ ಪಡೆದು, ಮತ್ತೊಂದು ಡೋಸ್ ಪಡೆಯಲು ಕಾಯುತ್ತಿದ್ದರೆ ಎರಡನೇ ಡೋಸ್ ಲಸಿಕೆ ಪಡೆಯುವವರೆಗೆ ಕಾಯಬೇಕು, ಅಲ್ಲಿಯವರೆಗೆ ಮಾಸ್ಕ್ ಧರಿಸಬೇಕು ಎಂದು ಅವರು ವಿವರಿಸಿದ್ದಾರೆ.

ಕೋವಿಶೀಲ್ಡ್ ಲಸಿಕೆಯ ಎರಡು ಡೋಸ್‌ಗಳ ನಡುವಿನ ಅಂತರ ವಿಸ್ತರಣೆಗೆ ಕೇಂದ್ರ ಅನುಮೋದನೆ

ಅಮೆರಿಕಾದಲ್ಲಿ ಕೇವಲ 114 ದಿನಗಳಲ್ಲಿ 250 ಮಿಲಿಯನ್ ಡೋಸ್ ಲಸಿಕೆ ನೀಡಲಾಗಿದೆ. ಇದರ ಪ್ರತಿಫಲವಾಗಿ 50 ರಾಜ್ಯಗಳ ಪೈಕಿ 49 ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ತಗ್ಗುತ್ತಿದೆ ಎಂದರು.

LEAVE A REPLY

Please enter your comment!
Please enter your name here