ಅಯೋಧ್ಯೆಯ ಭೂಮಿ ಪೂಜೆಯಲ್ಲಿ ಪ್ರಧಾನಿ ಭಾಗಿಯಾಗುವುದು ಸಾಂವಿಧಾನಿಕ ಉಲ್ಲಂಘನೆ : ಓವೈಸಿ

0
169
Tap to know MORE!

ನರೇಂದ್ರ ಮೋದಿಯವರು ದೇಶದ ಪ್ರಧಾನಮಂತ್ರಿಯಾಗಿ ರಾಮಮಂದಿರದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಒಂದು ಸಾಂವಿಧಾನಿಕ ಉಲ್ಲಂಘನೆಯಾಗಲಿದೆ ಎಂದು
ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿಕೆ ನೀಡಿದ್ದಾರೆ.

ಅಯೋಧ್ಯೆಯಲ್ಲಿ ಆಗಸ್ಟ್ 5ರಂದು ನಡೆಯಲಿರುವ ರಾಮಮಂದಿರ ಭೂಮಿ ಪೂಜೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಾಲ್ಗೊಳ್ಳುತ್ತಾರೆ ಎಂದು ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಹೇಳಿದೆ.

ಇದೀಗ ಈ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಓವೈಸಿ, ಜಾತ್ಯತೀತತೆಯು ಸಂವಿಧಾನದ ಮೂಲ ರಚನೆಯ ಒಂದು ಭಾಗವಾಗಿದೆ.

400 ವರ್ಷಗಳಿಂದ ಬಾಬ್ರಿ ಮಸೀದಿಯೂ ಅಯೋಧ್ಯೆಯಲ್ಲಿ ಇದ್ದದ್ದನ್ನು ನಾವು ಮರೆಯಲು ಸಾಧ್ಯವಿಲ್ಲ. ಆದರೆ ಅದನ್ನು ದುಷ್ಕರ್ಮಿಗಳು 1992 ರಲ್ಲಿ ಕೆಡವಿದರು” ಅಸದುದ್ದೀನ್ ಒವೈಸಿ ತಮ್ಮ ಟ್ವೀಟರ್ ನಲ್ಲಿ ಬರೆ

ಅಯೋಧ್ಯೆ ಬಾಬ್ರಿ ಮಸೀದಿ-ರಾಮಮಂದಿರ ಸುದೀರ್ಘ ವಿವಾದದ ತೀರ್ಪನ್ನು ನವೆಂಬರ್ ನಲ್ಲಿ ಸುಪ್ರೀಂಕೋರ್ಟ್ ನೀಡಿತ್ತು. ವಿವಾದಿತ ಸ್ಥಳದಲ್ಲಿ ಹಿಂದುಗಳು ರಾಮನ ದೇಗುಲ ಕಟ್ಟಬೇಕು.

ಹಾಗೂ ಮುಸ್ಲಿಮರಿಗೆ ಮಸೀದಿ ಕಟ್ಟಲು ಅಯೋಧ್ಯೆಯಲ್ಲಿ ಭೂಮಿ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಹೇಳಿತ್ತು.

ಆದರೆ ಅಯೋಧ್ಯೆ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಹಾಜರಾಗುವ ನಿರ್ಧಾರದ ಬಗ್ಗೆ ಇನ್ನು ಅಧಿಕೃತವಾಗಿ ನಿರ್ಧಾರವಾಗಿಲ್ಲ. ಅದಕ್ಕೂ ಮೊದಲೇ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

LEAVE A REPLY

Please enter your comment!
Please enter your name here