ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ : ಮೇ 15, 16 ರಂದು ಕರಾವಳಿ ಜಿಲ್ಲೆಗಳಲ್ಲಿ ಅತಿಯಾದ ಮಳೆಯಾಗುವ ಸಾಧ್ಯತೆ

0
126
Tap to know MORE!

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಕಾರಣ ಕರ್ನಾಟಕದ ಕೆಲ ಭಾಗಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ 15 ರಿಂದ ಮೇ 17ರ ತನಕ ರಾಜ್ಯದ ಕರಾವಳಿ ಭಾಗ ಸೇರಿದಂತೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಯಲ್ಲಿ ತೀವ್ರ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಮೇ 15 ಮತ್ತು 16 ರಂದು ಅತಿಯಾದ ಮಳೆಯಾಗುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ.

ಕೋವಿಡ್ ‘POSITIVE’: ಕೊರೋನಾ ಸೋಂಕನ್ನು ಜಯಿಸಿ ಬಂದ ಶತಾಯುಷಿ ಶ್ಯಾಮರಾವ್ ಇಂಗ್ಳೆ

ಅಂತೆಯೇ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಗದಗದ ಕೆಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿರುವ ಕಾರಣ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಮುಂದಿನ ವಾರದಿಂದ ಕೋವಿಡ್ ಲಸಿಕೆ ಸ್ಪುಟ್ನಿಕ್ V ಮಾರುಕಟ್ಟೆಯಲ್ಲಿ ಲಭ್ಯ

ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಕಾರಣ ಮೀನುಗಾರರು ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶ ನೀಡಿದೆ. ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲೂ 2 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಮೇ 15 ಮತ್ತು 16ರಂದು ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಸ್ಥಳಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಯಲ್ಲಿ ಮೇ 17ರಂದು ಭಾರೀ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here