BREAKING| ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಗೃಹಬಂಧನ !

0
205
Tap to know MORE!

ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಕೇಂದ್ರ ಸರ್ಕಾರ ಗೃಹ ಬಂಧನದಲ್ಲಿರಿಸಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.

ಕೇಂದ್ರ ಸರ್ಕಾರದ ಕೃಷಿ ಕಾನೂನನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಹಿನ್ನಲೆಯಲ್ಲಿ ನಿನ್ನೆ ದೆಹಲಿಯ ಸಿಂಗು ಗಡಿಯಲ್ಲಿ ಸಿಎಂ ಕೇಜ್ರಿವಾಲ್ ಅವರು ಪ್ರತಿಭಟನಾ ನಿರತ ರೈತರನ್ನು ಭೇಟಿ ಮಾಡಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಅರವಿಂದ್ ಕೇಜ್ರಿವಾಲ್ ಅವರನ್ನು ಗೃಹ ಬಂಧನದಲ್ಲಿರಿಸಲಾಗಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.

ಇದನ್ನೂ ಓದಿ: ಗಾಂಜಾ ಅಪಾಯಕಾರಿ ಅಲ್ಲ – ವಿಶ್ವಸಂಸ್ಥೆಯ ನಿರ್ಧಾರಕ್ಕೆ ಭಾರತ ಬೆಂಬಲ!

ಈ ಬಗ್ಗೆ ಟ್ವೀಟ್ ಮಾಡಿರುವ ಆಪ್, “ನಿನ್ನೆ ಸಿಂಗು ಗಡಿಯಲ್ಲಿ ರೈತರನ್ನು ಭೇಟಿ ಮಾಡಿದಾಗಿನಿಂದಲೂ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಬಿಜೆಪಿಯ ದೆಹಲಿ ಪೊಲೀಸರು ಗೃಹಬಂಧನದಲ್ಲಿರಿಸಿದ್ದಾರೆ. ಅವರ ನಿವಾಸದೊಳಗೆ ಪ್ರವೇಶಿಸಲು ಯಾರಿಗೂ ಅನುಮತಿ ನೀಡುತ್ತಿಲ್ಲ” ಎಂದು ಟ್ವೀಟ್ ಮಾಡಿದೆ.

ಇನ್ನು ನಿನ್ನೆ ಸಿಂಗು ಗಡಿಗೆ ಭೇಟಿ ನೀಡಿದ್ದ ಸಿಎಂ ಅರವಿಂದ್ ಕೇಜ್ರಿವಾಲ್ ಅವರು, ಪ್ರತಿಭಟನಾ ನಿರತ ರೈತರನ್ನು ಭೇಟಿ ಮಾಡಿ ಚರ್ಚಿಸಿದ್ದರು,. ಈ ವೇಳೆ ‘ನಾನು ವ್ಯವಸ್ಥೆಗಳನ್ನು ಪರಿಶೀಲಿಸಿದ್ದೇನೆ. ಕ್ರೀಡಾಂಗಣಗಳನ್ನು ತಾತ್ಕಾಲಿಕ ಕಾರಾಗೃಹಗಳಾಗಿ ಬಳಸಲು ನಮ್ಮ ಮೇಲೆ ಸಾಕಷ್ಟು ಒತ್ತಡವನ್ನು ಹೇರಲಾಗಿತ್ತು. ಆದರೆ ನಾವು ಅನುಮತಿ ನೀಡಲಿಲ್ಲ.ಇದು ರೈತರ ಪ್ರತಿಭಟನೆಗೆ ನೆರವಾಗಿದೆ ಎಂದು ನಾನು ಭಾವಿಸುತ್ತೇನೆ, ಅಂದಿನಿಂದ ನಮ್ಮ ಪಕ್ಷದ ಶಾಸಕರು ಮತ್ತು ಮಂತ್ರಿಗಳು ರೈತರಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

LEAVE A REPLY

Please enter your comment!
Please enter your name here