ಆಗಸ್ಟ್ ಅಂತ್ಯದೊಳಗೆ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲು ಚಿಂತನೆ: ಶಿಕ್ಷಣ ಸಚಿವ ನಾಗೇಶ್

0
240
Tap to know MORE!

ಬೆಂಗಳೂರು: “ಆಗಸ್ಟ್ ತಿಂಗಳ ಕೊ‌ನೆ ವಾರದಲ್ಲಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲು ಶಿಕ್ಷಣ ತಜ್ಞರೊಂದಿಗೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ಗಡಿ ಜಿಲ್ಲೆಗಳಲ್ಲಿ ಪರಿಸ್ಥಿತಿ ನೋಡಿಕೊಂಡು ಶಾಲೆ ಪ್ರಾರಂಭಿಸಲಾಗುತ್ತದೆ”, ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

ಸೋಮವಾರದಂದು ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಲಾಗಿದೆ.

ಆಗಸ್ಟ್ 23ರಿಂದ 9, 10 ಮತ್ತು ಪಿಯುಸಿ ತರಗತಿ ಪ್ರಾರಂಭ

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಇದೇ ವೇಳೆ ಮಾತನಾಡಿದ ಸಚಿವರು, “ಶಾಲೆ ಆರಂಭವಾಗುವುದು ವಿಳಂಬವಾದರೆ ಮತ್ತೆ ವಿದ್ಯಾಗಮ ಪ್ರಾರಂಭಿಸುತ್ತೇವೆ. ಆಗಸ್ಟ್ 23ರಿಂದ 9, 10, 11, 12ನೇ ತರಗತಿ ಆರಂಭವಾಗಲಿದೆ. ಇದೇ ರೀತಿ ಪ್ರಾಥಮಿಕ ತರಗತಿಗಳನ್ನೂ ಆರಂಭಿಸುವ ಕುರಿತು ಸಹ ಸಭೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ,” ಎಂದು ಮಾಹಿತಿ ನೀಡಿದರು.

“ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್​ಸೈಟ್​ ಮೂಲಕ ವೀಕ್ಷಿಸಬಹುದಾಗಿದೆ. ಈ ಬಾರಿ ಎಲ್ಲಾ ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದು, ಫಲಿತಾಂಶದ ಬಗ್ಗೆ ಅಸಮಾಧಾನ ಹೊಂದಿದವರು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದೆ,” ಎಂದು ಹೇಳಿದರು.

ಈ ಬಾರಿ ಒಟ್ಟಾರೆ ಪಾಸ್​ ಪರ್ಸೆಂಟೇಜ್ ಶೇಕಡಾ 99.9ರಷ್ಟು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಲ್ಲಿ 4,70,160 ಎಸ್‌ಎಸ್‌ಎಲ್‌ಸಿ ಬಾಲಕರು ಪಾಸಾಗಿದ್ದರೆ, 4,01,280 ಬಾಲಕಿಯರು ತೇರ್ಗಡೆಯಾಗಿದ್ದಾರೆ.

LEAVE A REPLY

Please enter your comment!
Please enter your name here