ಮುಲ್ಕಿ : 8 ವರ್ಷದ ಮಗು ಸಹಿತ ದಂಪತಿ ಆತ್ಮಹತ್ಯೆ..!

0
205
Tap to know MORE!

ಮುಲ್ಕಿ: ವಿನೋದ್ ಸಾಲಿಯಾನ್(40) ರಚನಾ ಸಾಲಿಯನ್ (38) ಮತ್ತು ಅವರ ಪುತ್ರ ಸಾಧ್ಯ ಸಾಲಿಯನ್ 8 ವರ್ಷದ ಬಾಲಕ ಸೇರಿ ದಂಪತಿಗಳು ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ

ಮೂಲತಃ ಹಳೆಯಂಗಡಿಯ ನಿವಾಸಿಯಾದ ವಿನೋದ್ ಸಾಲ್ಯಾನ್ ಕುಟುಂಬ, ಕಳೆದ ಹಲವಾರು ವರ್ಷಗಳಿಂದ ಮುಂಬೈಯಲ್ಲಿ ಹೋಟೆಲ್ ಉದ್ಯಮ ಮಾಡಿಕೊಂಡಿದ್ದು ಕಳೆದ ಒಂದು ವರ್ಷದ ಹಿಂದೆ ಊರಿಗೆ ಬಂದು ಹಳೆಯಂಗಡಿಯ ಕಲ್ಲಾಪು ರೈಲ್ವೇ ಗೇಟ್ ಬಳಿ ಬಾಡಿಗೆ ಮನೆ ಮಾಡಿಕೊಂಡಿದ್ದು ಊರಿನಲ್ಲಿ ರೀಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಸುಳ್ಯ : ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವತಿ!

ಶನಿವಾರ ಎಂದಿನಂತೆ ಇದ್ದ ದಂಪತಿಗಳು ಭಾನುವಾರ ದಿನ ಪೂರ್ತಿ ಮನೆಯ ಬಾಗಿಲು ತೆರೆಯದ ಕಾರಣ ಸಂಶಯಗೊಂಡ ಅಕ್ಕಪಕ್ಕದ ಮನೆಯವರು ಇಂದು ಸಂಜೆ ಮನೆಯ ಕಿಟಕಿ ಬಾಗಿಲು ಮುರಿದು ಪರಿಶೀಲಿಸಿದಾಗ ಆತ್ಮಹತ್ಯೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಸ್ಥಳೀಯರ ಮಾಹಿತಿ ಮೇರೆಗೆ ತಕ್ಷಣ ಸ್ಥಳಕ್ಕೆ ಧಾವಿಸಿದ ಮುಲ್ಕಿ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ಕಾರಣವೇನೆಂದು ಇನ್ನಷ್ಟೇ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಾಗಿದೆ.

“ಇದಕ್ಕೆಲ್ಲಾ ಶಾಲೆಯ ಆಡಳಿತ ಮಂಡಳಿ ಕಾರಣ” – ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ!

LEAVE A REPLY

Please enter your comment!
Please enter your name here