ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ – ಕಾರಣ ಅಸ್ಪಷ್ಟ!

0
204
Tap to know MORE!

ವಿಜಯಪುರ: ಅಕ್ಕಮಹಾದೇವಿ ವಿವಿಯ 11ನೇ ಘಟಿಕೋತ್ಸವ ನಡೆದ ಮಾರನೇ ದಿನ ವಿಶ್ವವಿದ್ಯಾಲಯದಲ್ಲಿ ಎಂಕಾಂ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ.

ಕಲಬುರಗಿಯ ಐಶ್ವರ್ಯ ಶಂಕರ ನಾಟೀಕಾರ (24) ಆತ್ಮಹತ್ಯೆ ಮಾಡಿಕೊಂಡ ಯುವತಿ. ಎಂಕಾಂ ಅಂತಿಮ ವರ್ಷದಲ್ಲಿ ಓದುತ್ತಿದ್ದ ಈಕೆಯ ಸಾವಿಗೆ ಕಾರಣ ತಿಳಿದುಬಂದಿಲ್ಲ. ವಿಜಯಪುರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯುವತಿ ಮನೆಯವರು ವರನನ್ನು ಗುರುತಿಸಿದ್ದರು. ಅಂತಿಮ ವರ್ಷದ ಪರೀಕ್ಷೆ ಬರೆದ ನಂತರ ನಿಶ್ಚಿತಾರ್ಥ ನಡೆಸಿ, ಮದುವೆ ಮಾಡಿಕೊಡಲು ಆಕೆಯ ಪೋಷಕರು ನಿರ್ಧರಿಸಿದ್ದರು. ಆದರೆ, ಅದಕ್ಕೂ ಮುನ್ನ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಸ್ಪಷ್ಟ ಕಾರಣ ಗೊತ್ತಾಗಿಲ್ಲ ಎಂದು ವಿವಿಯ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here