ಜಮ್ಮು ಕಾಶ್ಮೀರದಲ್ಲಿ ಆಯುಷ್ಮಾನ್ ಭಾರತ್ – “ಪಿಎಂ-ಜೆಎವೈ ಸೇಹತ್” ಗೆ ಚಾಲನೆ ನೀಡಿದ ಪ್ರಧಾನಿ ಮೋದಿ

0
44

ನವದೆಹಲಿ ಡಿ.27 (ಪಿಐಬಿ): “ಆಯಷ್ಮಾನ್ ಯೋಜನೆಯ ವ್ಯಾಪ್ತಿಯನ್ನು ಎಲ್ಲ ನಿವಾಸಿಗಳಿಗೂ ವಿಸ್ತರಣೆ ಮಾಡಿರುವುದು ಐತಿಹಾಸಿಕ ಕ್ರಮವಾಗಿದೆ. ಜಮ್ಮು ಮತ್ತು ಕಾಶ್ಮೀರ ತನ್ನ ಜನರ ಅಭಿವೃದ್ಧಿಗಾಗಿ ಇಂತಹ ಕ್ರಮಗಳನ್ನು ಕೈಗೊಳ್ಳುತ್ತಿರುವುದು ಸಂತಸ ತಂದಿದೆ. ಜಮ್ಮು ಮತ್ತು ಕಾಶ್ಮೀರದ ಜನರ ಅಭಿವೃದ್ಧಿ ನಮ್ಮ ಸರ್ಕಾರದ ದೊಡ್ಡ ಆದ್ಯತೆಯಾಗಿದೆ ಎಂದು ಶಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಪ್ರಧಾನಮಂತ್ರಿಯವರು ಜಮ್ಮು ಮತ್ತು ಕಾಶ್ಮೀರದ ಎಲ್ಲ ನಿವಾಸಿಗಳಿಗೆ ಆರೋಗ್ಯ ರಕ್ಷಣೆ ವ್ಯಾಪ್ತಿ ವಿಸ್ತರಿಸುವ ಆಯುಷ್ಮಾನ್ ಭಾರತ್ ಪಿಎಂ-ಜೆಎವೈ ಸೇಹತ್ ಗೆ ವಿಡಿಯೋಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು.

ಇದನ್ನೂ ಓದಿ: ನೂತನ ಸಂಸತ್ ಭವನಕ್ಕೆ ಭೂಮಿ ಪೂಜೆ ನೆರವೇರಿಸಿದ ಪ್ರಧಾನಿ ಮೋದಿ

ಜಮ್ಮು ಮತ್ತು ಕಾಶ್ಮೀರ ಆಯುಷ್ಮಾನ್ ಭಾರತ್ ಪಿಎಂ-ಜೆಎವೈ ಸೇಹತ್ ಯೋಜನೆ ಕುರಿತಂತೆ ಮಾತನಾಡಿದ ಪ್ರಧಾನಮಂತ್ರಿ ಅವರು, ಈ ಯೋಜನೆ ಅಡಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ದೊರಕಲಿದೆ ಮತ್ತು ಇದು ಜೀವನವನ್ನು ಸುಗಮಗೊಳಿಸಲಿದೆ. ಸದ್ಯ ರಾಜ್ಯದ 6 ಲಕ್ಷ ಕುಟುಂಬಗಳು ಆಯುಷ್ಮಾನ್ ಭಾರತ್ ಯೋಜನೆಯ ಲಾಭವನ್ನು ಪಡೆಯುತ್ತಿದ್ದಾರೆ. ಇದೀಗ ಎಲ್ಲ 21 ಲಕ್ಷ ಕುಟುಂಬಗಳಿಗೆ ಸೇಹತ್ ಯೋಜನೆ ಅಡಿ ಆ ಪ್ರಯೋಜನಗಳು ಲಭ್ಯವಾಗಲಿವೆ. ಈ ಯೋಜನೆಯ ಮತ್ತೊಂದು ಪ್ರಯೋಜನವೆಂದರೆ ಚಿಕಿತ್ಸೆ ಪಡೆಯುವುದು ಕೇವಲ ಸರ್ಕಾರಿ ಆಸ್ಪತ್ರೆಗಳಿಗೆ ಸೀಮಿತವಾಗಿಲ್ಲ. ಕೇವಲ ಜಮ್ಮು-ಕಾಶ್ಮೀರದಲ್ಲಿ ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಅವರು ಹೇಳಿದರು. ಅಲ್ಲದೆ ದೇಶಾದ್ಯಂತ ಈ ಯೋಜನೆ ಅಡಿ ನೋಂದಣಿ ಮಾಡಿಕೊಂಡಿರುವ ಸಹಸ್ರಾರು ಆಸ್ಪತ್ರೆಗಳಲ್ಲೂ ಕೂಡ ಚಿಕಿತ್ಸಾ ಪ್ರಯೋಜನವನ್ನು ಪಡೆಯಬಹುದಾಗಿದೆ ಎಂದು ಹೇಳಿದರು.

“ಮಹಿಳಾ ಸಬಲೀಕರಣ, ಯುವ ಜನತೆಗೆ ಅವಕಾಶಗಳನ್ನು ಸೃಷ್ಟಿಸುವುದು, ದಲಿತರು, ಶೋಷಿತರು ಮತ್ತು ದುರ್ಬಲ ವರ್ಗದವರ ಏಳಿಗೆ ಆಗಿರಬಹುದು ಅಥವಾ ಜನರ ಸಾಂವಿಧಾನಿಕ ಮತ್ತು ಮೂಲಭೂತ ಹಕ್ಕುಗಳ ರಕ್ಷಣೆಯ ಪ್ರಶ್ನೆಯಾಗಿರಬಹುದು. ಅಂತಹ ಸಂದರ್ಭಗಳಲ್ಲಿ ನಮ್ಮ ಸರ್ಕಾರ ಜನರ ಕಲ್ಯಾಣಕ್ಕಾಗಿ ಅಗತ್ಯ ನಿರ್ಧಾರಗಳನ್ನು ಕೈಗೊಳ್ಳಲಿದೆ” ಎಂದು ಪ್ರಧಾನಮಂತ್ರಿ ಹೇಳಿದರು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಸಾಂಕ್ರಾಮಿಕದ ವೇಳೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸುಮಾರು 18 ಲಕ್ಷ ಎಲ್ ಪಿ ಜಿ ಸಿಲಿಂಡರ್ ಗಳನ್ನು ಮತ್ತೆ ಭರ್ತಿ ಮಾಡಲಾಗಿದೆ. ಸ್ವಚ್ಛ ಭಾರತ ಅಭಿಯಾನದಡಿ ಜಮ್ಮು ಮತ್ತು ಕಾಶ್ಮೀರದಲ್ಲಿ 10 ಲಕ್ಷಕ್ಕೂ ಅಧಿಕ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಅಭಿಯಾನದ ಉದ್ದೇಶ ಕೇವಲ ಶೌಚಾಲಯಗಳನ್ನು ನಿರ್ಮಿಸುವುದಷ್ಟೇ ಅಲ್ಲ, ಜನರ ಆರೋಗ್ಯ ಸುಧಾರಣೆ ನಿಟ್ಟಿನ ಪ್ರಯತ್ನವಾಗಿದೆ. ಗ್ರಾಮೀಣ ರಸ್ತೆ ಸಂಪರ್ಕದ ಜೊತೆಗೆ ಮುಂದಿನ ಎರಡು-ಮೂರು ವರ್ಷಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ಪ್ರತಿಯೊಂದು ಮನೆಗೂ ಕೊಳವೆ ಮಾರ್ಗದ ಮೂಲಕ ಶುದ್ಧ ಕುಡಿಯುವ ನೀರು ಒದಗಿಸಲು ಪ್ರಯತ್ನಗಳು ನಡೆದಿವೆ ಎಂದು ಪ್ರಧಾನಮಂತ್ರಿ ಹೇಳಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಐಐಟಿ ಮತ್ತು ಐಐಎಂ ಸ್ಥಾಪನೆಯಿಂದಾಗಿ ಇಲ್ಲಿನ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರಕಲು ಸಹಾಯಕವಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಎರಡು ಏಮ್ಸ್ ಮತ್ತು ಎರಡು ಕ್ಯಾನ್ಸರ್ ಕೇಂದ್ರಗಳನ್ನೂ ಸಹ ನಿರ್ಮಿಸಲಾಗುತ್ತಿದೆ. ಅರೆ ವೈದ್ಯಕೀಯ ವಿದ್ಯಾರ್ಥಿಗಳು ಈ ಕೇಂದ್ರಗಳಲ್ಲಿ ತರಬೇತಿಗಳನ್ನು ಪಡೆಯಬಹುದಾಗಿದೆ ಎಂದು ಅವರು ಹೇಳಿದರು.

ಬಳಿಕ ಪ್ರಧಾನಮಂತ್ರಿ ಅವರು ಇದೇ ವೇಳೆ ಆ ಪ್ರಾಂತ್ಯದ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಶ್ರೀ ಅಮಿತ್ ಷಾ, ಡಾ.ಹರ್ಷವರ್ಧನ್, ಡಾ.ಜಿತೇಂದ್ರ ಸಿಂಗ್ ಮತ್ತು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗೌರ್ನರ್ ಶ್ರೀ ಮನೋಜ್ ಸಿನ್ಹಾ ಮತ್ತಿತರರು ಉಪಸ್ಥಿತರಿದ್ದರು.

ಬ್ರಿಟಿಷರ ವಿರುದ್ಧ ತಮ್ಮ ಬರವಣಿಗೆಗಳ ಮೂಲಕ ಹೋರಾಡಿದ ಕ್ರಾಂತಿಕಾರಿ ಪತ್ರಕರ್ತ ಬರೀಂದ್ರ ಕುಮಾರ್ ಘೋಷ್

LEAVE A REPLY

Please enter your comment!
Please enter your name here