ಭಾರೀ ಮಳೆಯ ಮುನ್ಸೂಚನೆ – ಕರಾವಳಿ, ಮಲೆನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

0
134
Tap to know MORE!

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾ­ಗಿ­ರುವ ವಾಯುಭಾರ ಕುಸಿತದಿಂದಾಗಿ ಆಂಧ್ರ ಕರಾವಳಿ ಜಿಲ್ಲೆಗಳಿಗೆ ಚಂಡಮಾರುತ ಅಪ್ಪಳಿಸುವ ಭೀತಿ ಎದುರಾಗಿದೆ. ಇದರ ಪರಿಣಾಮ ಆಂಧ್ರ, ತೆಲಂಗಾಣಕ್ಕೆ ಹೊಂದಿ­ಕೊಂಡಿರುವ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ.

ಮಂಗಳವಾರ ಮಧ್ಯಾಹ್ನದಿಂದಲೇ ವಿಜಯಪುರ, ಬಾಗಲಕೋಟ, ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ನೀಡಲಾಗಿದೆ. ಜತೆಗೆ ಈ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಬೆಳಗಾವಿ, ಧಾರವಾಡ, ಗದಗ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌ ಪ್ರಕಟಿಸಲಾಗಿದೆ.

ಕರಾವಳಿಯ ಮೂರೂ ಜಿಲ್ಲೆ ಹಾಗೂ ಮಲೆನಾಡಿನ ಮೂರು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸ­ಲಾಗಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಮುನ್ಸೂಚನೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನೈಋುತ್ಯ ಮುಂಗಾರು ತೆರೆ ಕಾಣುವ ವೇಳೆ ಕರುನಾಡು ಮಳೆನಾಡಾಗಿ ಪರಿವರ್ತನೆಗೊಂಡಿದೆ. ಚಾಮರಾಜನಗರ ಹೊರತುಪಡಿಸಿ ಉಳಿದೆಡೆ ಬುಧವಾರ ಭಾರಿ ಮಳೆ ಸುರಿಯುತ್ತಿದೆ.

LEAVE A REPLY

Please enter your comment!
Please enter your name here