ಆಳ್ವಾಸ್‌ನ ಇಬ್ಬರು ಕ್ರೀಡಾ ವಿದ್ಯಾರ್ಥಿಗಳು ಟೋಕಿಯೋ ಒಲಿಂಪಿಕ್ಸ್‌ಗೆ ಆಯ್ಕೆ | ತಲಾ 1 ಲಕ್ಷ ರೂಪಾಯಿ ನೀಡಿದ ಡಾ. ಆಳ್ವ

0
133
Tap to know MORE!

ಮೂಡುಬಿದಿರೆ: ಜಪಾನಿನಲ್ಲಿ ನಡೆಯುವ ಟೋಕಿಯೊ ಒಲಿಂಪಿಕ್‌ಗೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಇಬ್ಬರು ಕ್ರೀಡಾ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ, ಆಳ್ವಾಸ್‌ನ ಕ್ರೀಡಾ ವಿಭಾಗ ದತ್ತು ಶಿಕ್ಷಣದ ಅಡಿಯಲ್ಲಿ ವ್ಯಾಸಂಗ ಮಾಡುತ್ತಿರುವ ಧನಲಕ್ಷ್ಮಿ ಶೇಖರ್ ಹಾಗೂ ಶುಭಾ ವೆಂಕಟೇಶನ್ ಅವರು 4×400 ಮಿಕ್ಸಡ್ ರಿಲೆಯಲ್ಲಿ ದೇಶದ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ ಎಂದರು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

2016-17ನೇ ಶೈಕ್ಷಣಿಕ ವರ್ಷದಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಾಗಿ ಮಂಗಳೂರು ವಿಶ್ವವಿದ್ಯಾಲಯ ಹಾಗೂ ಅಖಿಲಭಾರತ ಅಂತರ ವಿಶ್ವವಿದ್ಯಾಲಯ ಕೂಟಗಳಲ್ಲಿ ಪ್ರತಿನಿಧಿಸಿದ್ದರು ಎಂದು ತಿಳಿಸಿದರು.

ಆಳ್ವಾಸ್‌ನಲ್ಲಿ ಬೃಹತ್ ವಿದ್ಯಾರ್ಥಿ ಲಸಿಕಾ ಅಭಿಯಾನ | ಎರಡು ದಿನದಲ್ಲಿ 3,563 ಫಲಾನುಭವಿಗಳಿಗೆ ಲಸಿಕೆ

ಆಳ್ವಾಸ್ ವಿದ್ಯಾಸಂಸ್ಥೆಯ ಹಲವಾರು ಕ್ರೀಡಾ ವಿದ್ಯಾರ್ಥಿಗಳು ಈಗಾಗಲೇ ಒಲಿಂಪಿಕ್‌ನಲ್ಲಿ ಭಾಗವಹಿಸುವ ಸಾಧನೆ ಮಾಡಿದ್ದು, ಈ ಬಾರಿಯ ಒಲಿಂಪಿಕ್‌ಗೆ ಆಯ್ಕೆಯಾದ ಇಬ್ಬರು ಪ್ರತಿಭಾನ್ವಿತ ಕ್ರೀಡಾ ವಿದ್ಯಾರ್ಥಿಗಳಿಗೆ ಡಾ.ಎಂ.ಮೋಹನ ಆಳ್ವರು ತಲಾ ₹1 ಲಕ್ಷ ಪ್ರೋತ್ಸಾಹಧನ ನೀಡಿದ್ದಾರೆ.

LEAVE A REPLY

Please enter your comment!
Please enter your name here