ದ.ಕ ಜಿಲ್ಲೆಯಾದ್ಯಂತ ನಾಳೆಯಿಂದ (ಜು.5) ರಾತ್ರಿ 9 ಗಂಟೆಯವರೆಗೆ ಖಾಸಗಿ ಬಸ್ ಸಂಚಾರ: ದಿಲ್‌ರಾಜ್ ಆಳ್ವ

0
305
Tap to know MORE!

ಮಂಗಳೂರು: “ನಾಳೆ (ಜು.5) ರಿಂದ ಜಿಲ್ಲೆಯಾದ್ಯಂತ ರಾತ್ರಿ 9 ಗಂಟೆಯವರೆಗೆ ಬಸ್ಸುಗಳು ಓಡಲಿವೆ. ಸರ್ಕಾರದ ಮಾರ್ಗಸೂಚಿ ಪಾಲಿಸುವ ಸಲುವಾಗಿ, ರಾತ್ರಿ ಕೊನೆಯ ಒಂದು ಟ್ರಿಪ್ ಕಡಿತಗೊಳಿಸಬೇಕಾದ ಅನಿವಾರ್ಯತೆ ಇದೆ ಎಂದು ದ.ಕ. ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್‌ ರಾಜ್ ಆಳ್ವ ಹೇಳಿದ್ದಾರೆ.

ಕೋವಿಡ್ ಎರಡನೇ ಅಲೆ ತಡೆಗಟ್ಟಲು ಹೇರಿದ್ದ ನಿರ್ಬಂಧಗಳ ಪೂರ್ಣ ಪ್ರಮಾಣದ ಅನ್‌ಲಾಕ್-3 ಘೋಷಣೆಯ ಬೆನ್ನಲ್ಲೇ ಜು.5ರಿಂದ 19ರವರೆಗೆ ರಾತ್ರಿ 9 ಗಂಟೆವರೆಗೆ ಖಾಸಗಿ ಬಸ್ ಓಡಾಟಕ್ಕೆ ಅವಕಾಶ ಸಿಕ್ಕಂತಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲೂ ರಾತ್ರಿ 9 ಗಂಟೆವರೆಗೆ ಖಾಸಗಿ ಬಸ್‌ಗಳು ಸಾರಿಗೆ ಸೇವೆ ನೀಡಲು ಸಜ್ಜಾಗಿವೆ.

ಅನ್ಲಾಕ್ ನಿಯಮಗಳನ್ನು ಇನ್ನಷ್ಟು ಸಡಿಲಿಸಿದ ರಾಜ್ಯ ಸರ್ಕಾರ | ದೇಗುಲಗಳು, ಮಾಲ್‌ಗಳನ್ನು ತೆರೆಯಲು ಅನುಮತಿ

ಈ ಬಗ್ಗೆ ಮಾತನಾಡಿದ ಆಳ್ವ, ರಾಜ್ಯ ಸರಕಾರದ ಪರಿಷ್ಕೃತ ಆದೇಶದಲ್ಲಿ ರಾತ್ರಿ 9 ಗಂಟೆವರೆಗೆ ಬಸ್ ಓಡಿಸಲು ಅನುಮತಿಸಲಾಗಿದೆ. ಜಿಲ್ಲೆಯಲ್ಲಿ ರಾತ್ರಿ 9ರ ಒಳಗಾಗಿ ಬಸ್ ಸಂಚಾರ ನಿಲುಗಡೆಯಾಗಬೇಕು. ಹಾಗಾಗಿ ಕೊನೆಯ ಟ್ರಿಪ್‌ನ್ನು ಕಡಿತ ಮಾಡುವ ಅಗತ್ಯವಿದೆ ಎಂದು ಹೇಳಿದರು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಜಿಲ್ಲೆಯಲ್ಲಿ ಸೋಮವಾರ ಸುಮಾರು 80-100 ಬಸ್‌ಗಳು ಸಂಚರಿಸುವ ಸಾಧ್ಯತೆ ಇದೆ. ಬಹುತೇಕ ಬಸ್‌ಗಳು ಸೇವೆಗೆ ಸಿದ್ಧಗೊಂಡಿದ್ದು, ಸೋಮವಾರ ಬೆಳಗ್ಗೆ ಇದರ ನಿಖರ ಸಂಖ್ಯೆ ದೊರೆಯಲಿದೆ ಎಂದು ಅವರು ತಿಳಿಸಿದರು.

LEAVE A REPLY

Please enter your comment!
Please enter your name here