FLASH| ಕಾಂಗ್ರೆಸ್ ಮುಖಂಡ ಆಸ್ಕರ್ ಫೆರ್ನಾಂಡಿಸ್ ರ ನಿಧನದ ಸುದ್ದಿ ಸುಳ್ಳು!

0
191
Tap to know MORE!

ಮಂಗಳೂರು: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ನಿಧನರಾಗಿದ್ದಾರೆ ಎಂಬ ಸುಳ್ಳು ವರದಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಕಳೆದ ಕೆಲವು ದಿನಗಳಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿರುವ ಅವರು, ಐಸಿಯು‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಸ್ಕರ್ ಫೆರ್ನಾಂಡಿಸ್‌ಗೆ ಐಸಿಯುನಲ್ಲಿ ಚಿಕಿತ್ಸೆ ; ವದಂತಿ ಹರಡಬೇಡಿ: ಕುಟುಂಬಸ್ಥರ ಮನವಿ

ಕೇರಳ: ಮಹಿಳೆಯರ ವಿರುದ್ಧದ ದೌರ್ಜನ್ಯ ತಡೆಯಲು ‘ಪಿಂಕ್ ಪ್ರೊಟೆಕ್ಷನ್’ ಯೋಜನೆಗೆ ಚಾಲನೆ

ಮನೆಯಲ್ಲಿ ಜಾರಿಬಿದ್ದು ತಲೆಗೆ ಪೆಟ್ಟು ಮಾಡಿಕೊಂಡಿದ್ದ ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದ ಅವರನ್ನು ಭಾನುವಾರ ಸಂಜೆ ಡಯಾಲಿಸಿಸ್‌ಗೆಂದು ಮಂಗಳೂರಿನ ಯೆನೆಪೊಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆಸ್ಪತ್ರೆಯಲ್ಲಿ ಹಿರಿಯ ವೈದ್ಯರು ಆಸ್ಕರ್ ಫೆರ್ನಾಂಡಿಸ್ ಅವರನ್ನು ಪರೀಕ್ಷಿಸಿದಾಗ ತಲೆಯ ಒಳಭಾಗಕ್ಕೆ ಪೆಟ್ಟು ಬಿದ್ದಿದ್ದು, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವುದು ಪತ್ತೆಯಾಗಿತ್ತು. ಆಸ್ಕರ್ ಫರ್ನಾಂಡಿಸ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಆಸ್ಕರ್ ಫೆರ್ನಾಂಡಿಸ್ ಯುಪಿಎ ಸರ್ಕಾರದ ಆಡಳಿತದ ಅವಧಿಯಲ್ಲಿ ಕೇಂದ್ರ ಮಂತ್ರಿಯಾಗಿದ್ದರು. ರಸ್ತೆ, ಸಾರಿಗೆ, ಹೆದ್ದಾರಿ ಮತ್ತು ಕಾರ್ಮಿಕ ಸಚಿವರಾಗಿಯೂ ಕೆಲಸ ಮಾಡಿದ್ದರು. ರಾಜೀವ್ ಗಾಂಧಿ ಜೊತೆಗೆ ಸಂಸತ್ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದರು. 1980ರಿಂದ 1996ರ ವರೆಗೆ ಕರ್ನಾಟಕದ ಉಡುಪಿ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿ ಆಯ್ಕೆ ಆಗಿದ್ದರು. ಬಳಿಕ, 1998ರಲ್ಲಿ ಹಾಗೂ 2004ರಲ್ಲಿ ರಾಜ್ಯಸಭೆಗೂ ಆಯ್ಕೆ ಆಗಿದ್ದರು.

LEAVE A REPLY

Please enter your comment!
Please enter your name here