ಇಂದಿರಾ ಕ್ಯಾಂಟೀನ್ ಹೆಸರನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಬದಲಿಸಿ: ಸಿಎಂಗೆ ಸಿ.ಟಿ.ರವಿ ಮನವಿ

0
229
Tap to know MORE!

ಬೆಂಗಳೂರು, ಆಗಸ್ಟ್‌ 07; ಬಸವರಾಜ ಬೊಮ್ಮಾಯಿ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಒಂಬತ್ತು ದಿನಗಳು ಕಳೆದಿವೆ. ರಾಜ್ಯಕ್ಕೆ ಪೂರಕವಾಗಿ ಹಲವು ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದ್ದು, ಮುಖ್ಯಮಂತ್ರಿಗಳ ಮುಂದೆ ಹಲವು ಪ್ರಸ್ತಾಪಗಳು ಬರುತ್ತಿವೆ.

ಇದೀಗ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೊಸ ಬೇಡಿಕೆಯೊಂದನ್ನು ಮುಖ್ಯಮಂತ್ರಿಗಳ ಮುಂದಿಟ್ಟಿದ್ದಾರೆ. ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ರಾಜ್ಯಾದ್ಯಂತ ಆರಂಭಿಸಲಾದ “ಇಂದಿರಾ ಕ್ಯಾಂಟೀನ್” ಹೆಸರನ್ನು “ಅನ್ನಪೂರ್ಣೇಶ್ವರಿ ಕ್ಯಾಂಟೀನ್” ಎಂದು ಬದಲಿಸಬೇಕಾಗಿ ಸಿ.ಟಿ. ರವಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಈ ಕುರಿತು ಟ್ವೀಟ್ ಮಾಡಿರುವ ಅವರು, “ಕರ್ನಾಟಕದಾದ್ಯಂತ ಇರುವ ಇಂದಿರಾ ಕ್ಯಾಂಟೀನ್ ಹೆಸರನ್ನು ಶೀಘ್ರವೇ ಅನ್ನಪೂರ್ಣೇಶ್ವರಿ ಕ್ಯಾಂಟೀನ್” ಎಂದು ಮರುನಾಮಕರಣ ಮಾಡಬೇಕೆಂದು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡುತ್ತೇನೆ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಇಂದಿರಾ ಕ್ಯಾಂಟೀನ್ ಕೂಡ ಒಂದಾಗಿತ್ತು. ತಮಿಳುನಾಡಿನ ಅಮ್ಮಾ ಕ್ಯಾಂಟೀನ್‌ನಿಂದ ಪ್ರೇರೇಪಣೆಗೊಂಡು ಅಂದಿನ ಸಿಎಂ ಸಿದ್ದರಾಮಯ್ಯ ಅಧಿಕಾರಾವಧಿಯಲ್ಲಿ ಬಡಜನರ ಹಸಿವು ನೀಗಿಸಲು ಇಂದಿರಾ ಕ್ಯಾಂಟೀನ್‌ಗಳನ್ನು ತೆರೆಯಲಾಗಿತ್ತು. ಮಾಜಿ ಪ್ರಧಾನಿ, ದಿವಂಗತ ಇಂದಿರಾ ಗಾಂಧಿ ಅವರ ಹೆಸರನ್ನು ಈ ಯೋಜನೆಗೆ ಇಡಲಾಗಿತ್ತು.

LEAVE A REPLY

Please enter your comment!
Please enter your name here