ಇಂದು ಹಸೆಮಣೆ ಏರಬೇಕಿದ್ದ ಮದುಮಗ ಕೋವಿಡ್ ಸೋಂಕಿಗೆ ಬಲಿ!

0
210
Tap to know MORE!

ಚಿಕ್ಕಮಗಳೂರು: ಕೊರೊನಾ ಎರಡನೇ ಅಲೆ ಗಂಭೀರ ಸ್ವರೂಪ ಪಡೆದಿದ್ದು ಸೋಂಕಿತರ ಸಂಖ್ಯೆ ಹಾಗೂ ಮರಣ ಪ್ರಮಾಣ ಎರಡೂ ಆತಂಕ ಸೃಷ್ಟಿಸುತ್ತಿದೆ. ಈ ಬಾರಿ ಯುವಕರನ್ನೂ ಕಾಡುತ್ತಿರುವ ಕೊರೊನಾ ಹಲವರನ್ನು ಸಾವಿನ ದವಡೆಗೆ ನೂಕಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ದೇವರಕೊಡಿಗೆಯಲ್ಲಿ ಇಂದು (ಏಪ್ರಿಲ್ 29) ಹಸೆಮಣೆ ಏರಬೇಕಾಗಿದ್ದ ಯುವಕನೋರ್ವ ಕೊರೊನಾ ಸೋಂಕಿನಿಂದ ದುರಂತ ಅಂತ್ಯ ಕಂಡಿದ್ದು ಇಡೀ ಊರಿನಲ್ಲಿ ಶೋಕ ಮಡುಗಟ್ಟಿದೆ. ದೇವರಕೊಡಿಗೆ ಗ್ರಾಮದ 32 ವರ್ಷದ ಪೃಥ್ವಿರಾಜ್ ಎಂಬ ಯುವಕ ಶಿವಮೊಗ್ಗ ಮೆಗ್ಗಾನ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ.

ಇಂದು ಮದುವೆಯಾಗಬೇಕಿದ್ದ ಪೃಥ್ವಿರಾಜ್ 10 ದಿನಗಳ ಹಿಂದೆಯಷ್ಟೇ ಬೆಂಗಳೂರಿನಿಂದ ಮನೆಗೆ ಬಂದಿದ್ದರು. ಆದರೆ, ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪೃಥ್ವಿರಾಜ್​ ಕೊರೊನಾ ಸೋಂಕಿನ ತೀವ್ರತೆಗೆ ಸಿಕ್ಕು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಕೋವಿಡ್ ಸೋಂಕಿನಿಂದ ನಟಿ ಮಾಲಾಶ್ರೀ ಪತಿ, ಖ್ಯಾತ ನಿರ್ಮಾಪಕ ರಾಮು ನಿಧನ!

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ವಿವಾಹ ಕಾರ್ಯಕ್ರಮದ ನಿಮಿತ್ತ ಸಂಭ್ರಮ ನೆಲೆಸಬೇಕಿದ್ದ ಮನೆಯಲ್ಲಿ ಕೊರೊನಾದಿಂದಾಗಿ ಸೂತಕ ಆವರಿಸಿದ್ದು, ಯುವಕನ ಸಾವಿಗೆ ಗ್ರಾಮಸ್ಥರು, ಸಂಬಂಧಿಕರು ಕಣ್ಣೀರಿಡುತ್ತಿದ್ದಾರೆ. ಮೊದಲನೇ ಅಲೆಯಲ್ಲಿ ವಯೋವೃದ್ಧರು ಹಾಗೂ ಇನ್ನಿತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದವರಿಗೆ ಮಾತ್ರ ಪ್ರಾಣಾಪಾಯ ಸೃಷ್ಟಿಸುತ್ತಿದ್ದ ಕೊರೊನಾ ವೈರಾಣು ಇದೀಗ ಆರೋಗ್ಯವಂತ ಯುವಕರ ಸಾವಿಗೂ ಕಾರಣವಾಗುತ್ತಿರುವುದು ವೈದ್ಯಕೀಯ ವಲಯದಲ್ಲಿ ಆತಂಕ ಮೂಡಿಸಿದೆ.

LEAVE A REPLY

Please enter your comment!
Please enter your name here