ಉಡುಪಿ: ಕೌನ್ ಬನೇಗ ಕರೊಡ್ಪತಿ ಸ್ಟುಡೆಂಟ್ ಸ್ಪೆಷಲ್ ಸಪ್ತಾಹಕ್ಕಾಗಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ವೇದಾಂತ ಆನ್ಲೈನ್ ಲರ್ನಿಂಗ್ ಆಪ್ ಅ.5 ರಿಂದ 25ರವರೆಗೆ ಕ್ವಿಝ್ ಸ್ಪರ್ಧೆಯನ್ನು ಆಯೋಜನೆ ಮಾಡಿತ್ತು.
ಈ ಕ್ವಿಜ್ ನಲ್ಲಿ ಇಲ್ಲಿನ ವಿದ್ಯೋದಯ ಪಬ್ಲಿಕ್ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಅನಾಮಯ ಯೋಗೇಶ್ ದಿವಾಕರ್ ಕೌನ್ ಬನೇಗಾ ಕರೋಡ್ಪತಿಯ ವಿಶೇಷ ಸಂಚಿಕೆಯಲ್ಲಿ ಭಾಗವಹಿಸುವ ಅವಕಾಶ ಪಡೆದಿದ್ದಾರೆ.
ಇದನ್ನೂ ಓದಿ: 15 ವರ್ಷದ ಇಂಡೋ-ಅಮೇರಿಕನ್ ಗೀತಾಂಜಲಿ ರಾವ್ ಟೈಮ್ಸ್ “ಕಿಡ್ ಆಫ್ ದ ಇಯರ್” ಆಗಿ ಆಯ್ಕೆ
ದೇಶದಾದ್ಯಂತ ಸುಮಾರು 1.5 ಲಕ್ಷ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಪೈಕಿ ಎಂಟು ಮಂದಿ ಫೈನಲಿಸ್ಟ್ ವಿದ್ಯಾರ್ಥಿಗಳಲ್ಲಿ ಉಡುಪಿಯ ಅನಾಮಯ ಯೋಗೇಶ್ ದಿವಾಕರ್ ಕೂಡಾ ಒಬ್ಬರು.
ಸುದ್ದಿಗಳನ್ನು ವಾಟ್ಸಾಪ್ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ