ಉಡುಪಿ| ಸಾರ್ವಜನಿಕ ಹೊಸ ವರ್ಷಾಚರಣೆಗೆ ಅವಕಾಶವಿಲ್ಲ – ಜಿಲ್ಲಾಧಿಕಾರಿ

0
126
Tap to know MORE!

ಉಡುಪಿ ಡಿ‌.27: ಹೊಸ ವರ್ಷದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ರೆಸ್ಟೋರೆಂಟ್, ಸ್ಟಾರ್ ಹೊಟೇಲ್ ಗಳಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸುವಂತಿಲ್ಲ. ಎಂದಿನಂತೆ ಹೊಟೇಲ್, ರೆಸ್ಟೋರೆಂಟ್ ತೆರೆಯುವುದಕ್ಕೆ ಸಮಸ್ಯೆ ಇಲ್ಲ. ಆದರೆ, ಸಾರ್ವಜನಿಕವಾಗಿ ಹೊಸ ವರ್ಷದ ಸಂಭ್ರಮಾಚರಣೆಗೆ ಅವಕಾಶ ಇಲ್ಲ ಎಂದು ಉಡುಪಿ ಡಿ.ಸಿ.ಜಗದೀಶ್ ಹೇಳಿದ್ದಾರೆ.

ನಿಮ್ಮ ಮನೆಗಳಲ್ಲಿಯೇ ಹೊಸ ವರ್ಷದ ಸಂಭ್ರಮಾಚರಣೆ ಮಾಡಿ ಎಂದು ಹೇಳಿರುವ ಜಿಲ್ಲಾಧಿಕಾರಿ, ವಿಶೇಷ ಕಾರ್ಯಕ್ರಮ ಆಯೋಜಿಸುವುದು, ಆಫರ್ ಮೂಲಕ ಗ್ರಾಹಕರನ್ನು ಆಕರ್ಷಿಸುವುದು ತಪ್ಪು. ಎಲ್ಲರೂ ಕೋವಿಡ್ ನಿಯಮಾವಳಿ ಕಡ್ಡಾಯ ಪಾಲಿಸಿ ಎಂದು ಅವರು ಕಳಕಳಿಯ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕೌನ್‌‌ ಬನೇಗಾ ಕರೋಡ್‌‌‌ಪತಿಗೆ ಉಡುಪಿಯ ವಿದ್ಯಾರ್ಥಿ ಅನಾಮಯ ಆಯ್ಕೆ

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

LEAVE A REPLY

Please enter your comment!
Please enter your name here