ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ!

0
180
Tap to know MORE!

ಉಡುಪಿ: ಜಿಲ್ಲಾಧಿಕಾರಿ ಜಿ.ಜಗದೀಶ ಅವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದಿರುವ ಕುರಿತು ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೇ 31 ರಂದು ಕಿಡಿಗೇಡಿಗಳು ‘DC Udupi’ ಎಂಬ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆಯನ್ನು ಸೃಷ್ಟಿಸಿ, ಪ್ರೊಫೈಲಿಗೆ ಜಿಲ್ಲಾಧಿಕಾರಿಗಳ ಫೋಟೋವನ್ನು ಹಾಕಿ ದುರ್ಬಳಕೆ ಮಾಡಿಕೊಂಡಿದ್ದಾರೆ.

ಉಡುಪಿ: ಮಕ್ಕಳ ದತ್ತು ಸ್ವೀಕಾರ ಕೇಂದ್ರದ 12 ಮಕ್ಕಳು ಹಾಗೂ 9 ಸಿಬ್ಬಂದಿಗಳಿಗೆ ಕೊರೋನಾ!

ಇದೆ ನಕಲಿ ಖಾತೆಯಿಂದ ಸಾರ್ವಜನಿಕರಿಗೆ ಹಣ ಕೇಳಿ ಸಂದೇಶ ಕಳುಹಿಸಿ ಅವರ ವೈಯಕ್ತಿಕ ಗೌರವಕ್ಕೆ ದಕ್ಕೆ ಉಂಟು ಮಾಡಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಈ ಕುರಿತು ಕಿಡಿಗೇಡಿಗಳ ವಿರುದ್ದ ಉಡುಪಿ ಸೆನ್‌ ಅಪರಾಧ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 66(c), 66(d) ಐ.ಟಿ. ಆಕ್ಟ್ ರಂತೆ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here