ನ.5 ರಿಂದ 7 ರವರೆಗೆ ದ.ಕ, ಉಡುಪಿ ಸೇರಿದಂತೆ ರಾಜ್ಯದ 6 ಜಿಲ್ಲೆಗಳಲ್ಲಿ ಮಳೆ

0
123
Tap to know MORE!

ಬೆಂಗಳೂರು, ನ 02: ಕರ್ನಾಟಕದ 6 ಜಿಲ್ಲೆಗಳಲ್ಲಿ ನವೆಂಬರ್ 5 ರಿಂದ 7ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ನವೆಂಬರ್ 5 ರಿಂದ 7ರವರೆಗೆ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಬೀದರ್‌ನಲ್ಲಿ ಅತಿ ಕನಿಷ್ಠ ಅಂದರೆ 12.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಲಿದೆ. ಶೃಂಗೇರಿ, ಬಾಳೆಹೊನ್ನೂರು,ಕೊಟ್ಟಿಗೆಹಾರ, ಧರ್ಮಸ್ಥಳ, ಭಾಗಮಂಡಲ, ಬಂಡೀಪುರದಲ್ಲಿ ಮಳೆಯಾಗಲಿದೆ.

ಇದನ್ನೂ ಓದಿ: ತುಳುನಾಡು ಪ್ರತ್ಯೇಕ ರಾಜ್ಯದ ಹೋರಾಟಕ್ಕೆ ಬೆಂಬಲವಿಲ್ಲ : ದಯಾನಂದ ಕತ್ತಲ್‌ಸಾರ್

ಈಗಾಗಲೇ ಮುಂಗಾರು ಅವಧಿ ಮುಗಿದಿದ್ದು, ಹಿಂಗಾರು ಮಳೆ ಆರಂಭವಾಗಿದೆ. ಅಲ್ಲದೆ ವಾತಾವರಣದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿದ್ದು, ನವೆಂಬರ್ 4ರ ನಂತರ ರಾಜ್ಯದಲ್ಲಿ ಮತ್ತೊಂದು ಸುತ್ತಿನ ಮಳೆಯಾಗುವ ಸಾಧ್ಯತೆಗಳಿವೆ. ಅಕ್ಟೋಬರ್ 28ಕ್ಕೆ ನೈರುತ್ಯ ಮುಂಗಾರು ಮರಳುವಿಕೆ ಮುಗಿದಿದ್ದು, ಈಶಾನ್ಯ ಹಿಂಗಾರು ಆರಂಭವಾಗಿದೆ.

ಈ ನಡುವೆ ಕಳೆದೊಂದು ವಾರದಿಂದ ರಾಜ್ಯದಲ್ಲಿ ಒಣಹವೆ ಮುಂದುವರೆದಿದ್ದು, ಮಳೆಯ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. ಅರಬೀಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ನವೆಂಬರ್ 4ರಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಮತ್ತೆ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿವೃತ್ತ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದರು.

LEAVE A REPLY

Please enter your comment!
Please enter your name here