ಉತ್ತರಾಖಂಡ: ನೂತನ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಆಯ್ಕೆ | 4 ತಿಂಗಳೊಳಗೆ ರಾಜ್ಯಕ್ಕೆ 3ನೇ ಸಿಎಂ!

0
128
Tap to know MORE!

ಡೆಹ್ರಾಡೂನ್, ಜುಲೈ 03: ಮುಖ್ಯಮಂತ್ರಿ ತೀರಥ್ ಸಿಂಗ್ ರಾವತ್ ನಿನ್ನೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಇಂದು ನಡೆದ ಸಭೆಯಲ್ಲಿ, ಉತ್ತರಾಖಂಡದ ನೂತನ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಆಯ್ಕೆಯಾಗಿದ್ದಾರೆ. ಹೊಸ ಶಾಸಕಾಂಗ ಪಕ್ಷದ ನಾಯಕ ಆಯ್ಕೆಗೆ ವೀಕ್ಷಕರಾಗಿ ಹೈಕಮಾಂಡ್ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಕಳುಹಿಸಿತ್ತು.

ಪಕ್ಷದ ಕಚೇರಿಯಲ್ಲಿ ಸಭೆ ನಡೆಸಿದ ನರೇಂದ್ರ ಸಿಂಗ್ ತೋಮರ್ ಶಾಸಕರ ಒಪ್ಪಿಗೆ ಮೇರೆಗೆ ಪುಷ್ಕರ್ ಸಿಂಗ್ ಧಾಮಿ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದ್ದಾರೆ.

ಮುಂದಿನ ಎರಡು ವರ್ಷ ನಾನೇ ಮುಖ್ಯಮಂತ್ರಿ: ಬಿ. ಎಸ್. ಯಡಿಯೂರಪ್ಪ

ಖತೀಮ್ ಕ್ಷೇತ್ರದ ಹಾಲಿ ಶಾಸಕರಾಗಿರುವ ಪುಷ್ಕರ್ ಸಿಂಗ್ ಧಾಮಿ ಉತ್ತರಾಖಂಡದ 11ನೇ ಸಿಎಂ ಆಗಿ ಶೀಘ್ರದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಉತ್ತರಾಖಂಡ್‌ ವಿಧಾನಸಭೆಗೆ ಒಂದು ವರ್ಷದ ಒಳಗೆ ಚುನಾವಣೆ ನಡೆಯಲಿದ್ದು, ಚುನಾವಣಾ ವರ್ಷದಲ್ಲಿ ಧಾಮಿ ಸಿಎಂ ಸ್ಥಾನಕ್ಕೇರಿದ್ದಾರೆ. ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುವ ಹೊಣೆ ಈಗ ಅವರ ಮೇಲಿದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಶಾಸಕರಲ್ಲದೆ ಸಿಎಂ ಸ್ಥಾನಕ್ಕೇರಿದ್ದ ಅವರು ಹುದ್ದೆ ಉಳಿಸಿಕೊಳ್ಳಬೇಕಿದ್ದರೆ ಆರು ತಿಂಗಳ ಒಳಗೆ ವಿಧಾನಸಭೆಗೆ ಆಯ್ಕೆಯಾಗಬೇಕಿತ್ತು. ಆದರೆ ಸೆಪ್ಟೆಂಬರ್‌ 10ರ ಒಳಗೆ ಶಾಸಕರಾಗುವ ಸಾಧ್ಯತೆಯೇ ಇಲ್ಲದ ಕಾರಣಕ್ಕೆ ಅವರು ಅನಿವಾರ್ಯವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದುಕೊಳ್ಳಲಾಗಿದೆ.

ಕೊರೊನಾದಿಂದಾಗಿ ಉಪ ಚುನಾವಣೆ ನಡೆಯದೆ ಇರುವುದರಿಂದಾಗಿ ಈ ನಿರ್ಧಾರ ಸರಿಯೆಂದು ಭಾವಿಸುತ್ತಿದ್ದೇನೆ ಎಂದಿದ್ದರು. ಇದೀಗ ಮುಖ್ಯಮಂತ್ರಿ ಸ್ಥಾನಕ್ಕೆ ಪುಷ್ಕರ್ ಸಿಂಗ್ ಧಾಮಿ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here