ಉತ್ತರ ಪ್ರದೇಶ ಜಿಲ್ಲಾ ಪಂಚಾಯತ್ ಚುನಾವಣೆ: ಬಿಜೆಪಿಗೆ ಅಭೂತಪೂರ್ವ ಗೆಲುವು

0
172
Tap to know MORE!

ಉತ್ತರ ಪ್ರದೇಶ(ಜು.03): ಮುಂಬರುವ ವಿಧನಾಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿತವಾಗಿದ್ದ ಉತ್ತರ ಪ್ರದೇಶ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದೆ. ಜಿಲ್ಲಾ ಪಂಚಾಯತ್ ಚುನಾವಣೆಯ 75 ಸ್ಥಾನಗಳ ಪೈಕಿ 67 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

ಈ ಚುನಾವಣೆಯಲ್ಲಿ 22 ಜಿಲ್ಲಾ ಪಂಚಾಯತ್ ಅಧ್ಯಕ್ಷರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವಿರೋಧ ಆಯ್ಕೆಯಲ್ಲಿ 21 ಸ್ಥಾನ ಬಿಜೆಪಿ ಪಾಲಾಗಿದ್ದರೆ, 1 ಸ್ಥಾನ ಸಮಾಜವಾದಿ ಪಕ್ಷದ ಪಾಲಾಗಿದೆ. ಇದೀಗ ಬಿಜೆಪಿಯ ಅಭೂತಪೂರ್ವ ಗೆಲುವಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಭಿನಂದನೆ ಸಲ್ಲಿಸಿದ್ದಾರೆ.

ಭೂಕಬಳಿಕೆ ಆರೋಪ ಹೊತ್ತಿದ್ದ ತೆಲಂಗಾಣದ ಮಾಜಿ ಸಚಿವ ಈಟಲ ರಾಜೇಂದರ್ ಬಿಜೆಪಿ ಸೇರ್ಪಡೆ

ಉತ್ತರ ಪ್ರದೇಶ ಜಿಲ್ಲಾ ಪಂಚಾಯತ್ ಅಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ದಾಖಲಿಸಿದೆ. ಇದು, ಉತ್ತಮ ಆಡಳಿತ, ಪ್ರಧಾನ ಮಂತ್ರಿ ಸಾರ್ವಜನಿಕ ಕಲ್ಯಾಣ ನೀತಿ ಹಾಗೂ ಜನರು ಬಿಜೆಪಿ ಮೇಲಿಟ್ಟಿರು ನಂಬಿಕೆಯ ಗೆಲುವಾಗಿದೆ. ರಾಜ್ಯದ ಜನತೆಗೆ ಸೇರಿದಂತೆ ಎಲ್ಲರಿಗೂ ಧನ್ಯವಾದ ಎಂದು ಸಿಎಂ ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಬಿಜೆಪಿ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಯುಪಿ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಯ ಅದ್ಭುತ ಗೆಲುವು ಅಭಿವೃದ್ಧಿ, ಸಾರ್ವಜನಿಕ ಸೇವೆಗೆ ಜನ ನೀಡಿದ ಆಶೀರ್ವಾದ. ಇದರ ಶ್ರೇಯಸ್ಸು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನೀತಿ, ಪಕ್ಷದ ಕಾರ್ಯಕರ್ತರ ಶ್ರಮಕ್ಕೆ ಸಲ್ಲಲಿದೆ. ಉತ್ತರ ಪ್ರದೇಶ ಸರ್ಕಾರ ಹಾಗೂ ಬಿಜೆಪಿ ಸಂಘಟನೆಗೆ ಹೃತ್ಪೂರ್ವಕ ಅಭಿನಂದನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here