ಉಡುಪಿ : ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ, ಉದ್ಯಾವರ ಮಾಧವ ಆಚಾರ್ಯ ನಿಧನ

0
243
Tap to know MORE!

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಹಾಗೂ ಹಿರಿಯ ರಂಗಕರ್ಮಿ ಉದ್ಯಾವರ ಮಾಧವ ಆಚಾರ್ಯರವರು ನಿನ್ನೆ ನಿಧನರಾದರು. 79 ವರ್ಷದ ಇವರು ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾಗಿದ್ದರು.

ಅನೇಕ ರಂಗ ಪ್ರಬಂಧಗಳನ್ನು ಬರೆದ ಇವರು ಸಾಹಿತ್ಯ ಕ್ಷೇತ್ರಕ್ಕೆ ಕೊಡಮಾಡಿದ ಕೊಡುಗೆ ಜನಮನ್ನಣೆ ಪಡೆದಿದೆ.

ಇದನ್ನೂ ಓದಿ: “ಇದಕ್ಕೆಲ್ಲಾ ಶಾಲೆಯ ಆಡಳಿತ ಮಂಡಳಿ ಕಾರಣ” – ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ!

ಹಾಡಿ, ಭಾಗದೊಡ್ಡಮ್ಮನ ಕತೆ, ನೀಡು ಪಾಥೇಯವನು ಮೊದಲಾದ ಕಥಾ ಸಂಕಲನಗಳನ್ನು ನೀಡಿದ್ದ ಮಾಧವ ಆಚಾರ್ಯರು ಕವಿ, ನಟ, ಪ್ರಸಿದ್ಧ ಗುಡ್ಡೆದ ಭೂತ ಧಾರಾವಾಹಿಯ ನಟ, ಉಡುಪಿಯ ಸಮೂಹ ಸಂಸ್ಥೆಯ ಸಂಸ್ಥಾಪಕರಾಗಿದ್ದ ಇವರು, ಅರುಂಧತಿ, ಹರಣಾಭಿಸರಣ, ಶಬರಿ ಹಂಸದಮಯಂತಿ ಮೊದಲಾದ ಯಶಸ್ವಿ ನೃತ್ಯ ರೂಪಕಗಳ ಮೂಲಕ ರಾಜ್ಯಾದ್ಯಂತ ಜನಮನ್ನಣೆಗಳಿಸಿದರು. ಮಾಧವ ಆಚಾರ್ಯರವರು ನಾಡಿನಾದ್ಯಂತ 50ಕ್ಕೂ ಹೆಚ್ಚು ನಾಟಕ, ನೃತ್ಯರೂಪಕಗಳನ್ನು ನಿರ್ದೇಶಿಸಿ ರಾಜ್ಯೋತ್ಸವ, ರಂಗ ವಿಶಾರದ ಪ್ರಶಸ್ತಿಗೆ ಭಾಜನರಾಗಿದ್ದರು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಮಾಧವ ಆಚಾರ್ಯರವರ ನಿಧನಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ಕೆ. ರಘುಪತಿ ಭಟ್, ಲಾಲಾಜಿ ಮೆಂಡನ್, ಮಾಜಿ ಸಚಿವರುಗಳಾದ ಪ್ರಮೋದ್ ಮಧ್ವರಾಜ್, ವಿನಯ ಕುಮಾರ್ ಸೊರಕೆ, ಮುರಲಿ ಕಡೆಕಾರ್ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here