ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳು ಆರಂಭ!

0
140
Tap to know MORE!

ಬೆಂಗಳೂರು, ಸೆ. 4: ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ ರಾಜ್ಯದಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಈ ಹಿನ್ನೆಲೆಯಲ್ಲಿ, ಸರ್ಕಾರಿ ಶಾಲೆಗಳಲ್ಲೂ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ತೆರೆಯಲು ಸರ್ಕಾರ ನಿರ್ಧರಿಸಿದೆ.

ಮೊದಲ ಹಂತದಲ್ಲಿ, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ 276 ಸರ್ಕಾರಿ ರಾಜ್ಯ ಪಬ್ಲಿಕ್ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಶಿಕ್ಷಣ ತರಗತಿಗಳನ್ನು ಪ್ರಾರಂಭಿಸಲು ಗುರುವಾರ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.

ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ ರಾಜ್ಯದ ಎಲ್ಲಾ ಶಾಲೆಗಳಲ್ಲೂ ಎಲ್‌ಕೆಜಿ, ಯುಕೆಜಿ ಪ್ರಾರಂಭಿಸಲು ಸರ್ಕಾರ ಚಿಂತನೆ ನಡೆಸಿದೆ. ಆದರೆ ಪ್ರಸಕ್ತ ವರ್ಷದಿಂದ 276 ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ ಮಾತ್ರ ಎಲ್‌ಕೆಜಿ, ಯುಕೆಜಿ ತರಗತಿ ಪ್ರಾರಂಭಿಸಲು ಅನುಮತಿ ನೀಡಲಾಗಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here