ಗಾನಗಂಧರ್ವ ಎಸ್‌ಪಿ ಬಾಲಸುಬ್ರಹ್ಮಣ್ಯಂ ಇನ್ನಿಲ್ಲ!

0
184
Tap to know MORE!

ಭಾರತ ಚಿತ್ರರಂಗ ಕಂಡ ಮಹಾನ್ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಇನ್ನಿಲ್ಲ. ಕೊರೋನಾ ಸೋಂಕಿನಿಂದಾಗಿ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಮಧ್ಯಾಹ್ನ 1.04ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಮಗ ಚರಣ್​ ತಿಳಿಸಿದ್ದಾರೆ.

ಕೋವಿಡ್ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಸ್​.ಪಿ.ಬಾಲಸುಬ್ರಹ್ಮಣಂ ಅವರನ್ನು ಆಗಸ್ಟ್​ 5ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಗಸ್ಟ್ 13ರಂದು ಅವರ ಆರೋಗ್ಯ ಸ್ಥಿತಿ ಗಂಭೀರವಾದ ಕಾರಣ ತಜ್ಞ ವೈದ್ಯರ ಸಲಹೆಯಂತೆ ಅವರನ್ನು ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿತ್ತು.

ನಂತರ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು. ಆಸ್ಪತ್ರೆಯ ಬೆಡ್​ ಮೇಲೆ ಮಲಗಿಯೇ ಥಮ್ಸ್​ ಅಪ್​ ತೋರಿದ್ದ ಅವರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಆದರೆ ಮತ್ತೆ ಆ.20ರಂದು ಅವರ ಆರೋಗ್ಯದ ಸ್ಥಿತಿ ಗಂಭೀರವಾಗಿ, ತಜ್ಞ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ತೀವ್ರ ನಿಗಾವಹಿಸಿ ಚಿಕಿತ್ಸೆ ನೀಡುತ್ತಿದೆ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಲಾಗಿತ್ತು.

ನಂತರ ಗಾಯಕನ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತಾದರೂ, ವೆಂಟಿಲೇರ್​ನಲ್ಲೇ ಇಡಲಾಗಿತ್ತು. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದ ಕುರಿತಾಗಿ ಅವರ ಮಗ ಚರಣ್​ ಸಾಮಾಜಿಕ ಜಾಲತಾಣದ ಮೂಲಕ ಅಪ್ಡೇಟ್​ ನೀಡುತ್ತಿದ್ದರು.

ಈ ನಡುವೆ ಎಸ್​ಪಿಬಿ ಅವರಿಗೆ ಕೊರೋನಾ ಪರೀಕ್ಷೆ ಸಹ ಮಾಡಲಾಗಿದ್ದು, ಅದು ಸಹ ನೆಗೆಟಿವ್​ ಬಂದಿತ್ತು. ಈ ವಿಷಯವನ್ನು ಹಂಚಿಕೊಂಡಿದ್ದ ಚರಣ್​ ಅವರು, ಸದ್ಯದಲ್ಲೇ ತಮ್ಮ ತಂದೆಯನ್ನು ಮನೆಗೆ ಕರೆದುಕೊಂಡು ಹೋಗುವ ಆಶಯ ವ್ಯಕ್ತಪಡಿಸಿದ್ದರು. ಆದರೆ ವಿಧಿಯಾಟವೇ ಬೇರೆಯಾಗಿತ್ತು.

LEAVE A REPLY

Please enter your comment!
Please enter your name here