ಏಮ್ಸ್ ಪ್ರವೇಶ ಪರೀಕ್ಷೆ: ಕರ್ನಾಟಕದ ವಿದ್ಯಾರ್ಥಿನಿ ದೇಶಕ್ಕೇ ಪ್ರಥಮ

0
181
Tap to know MORE!

ವಿಜಯಪುರ: ನವದೆಹಲಿಯ ಏಮ್ಸ್ ಅಖಿಲ ಭಾರತ ಮಟ್ಟದಲ್ಲಿ ನಡೆಸಿದ ಪ್ರವೇಶ ಪರೀಕ್ಷೆಯ ಫಲಿತಾಂಶ ರವಿವಾರ ಪ್ರಕಟವಾಗಿದ್ದು, ಡಿಎಂ- ಜನರಲ್ ಕ್ರಿಟಿಕಲ್ ಕೇರ್ ಮೆಡಿಸಿನ್ ವಿಭಾಗದಲ್ಲಿ ವಿಜಯಪುರದ ವೈದ್ಯಕೀಯ ವಿದ್ಯಾರ್ಥಿನಿ ದಿವ್ಯಾ ಅರವಿಂದ ಹಿರೊಳ್ಳಿ ರಾಷ್ಟ್ರಮಟ್ಟದಲ್ಲಿ ಪ್ರಥಮ ರ‍್ಯಾಂಕ್ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಮಾಸ್ಕ್ ಧರಿಸದವರಿಗೆ “ಕೊರೋನಾ” ಕುರಿತು ಪ್ರಬಂಧ ಬರೆಯುವ ಶಿಕ್ಷೆ ವಿಧಿಸಿದ ಮ್ಯಾಜಿಸ್ಟ್ರೇಟ್!

ಏಮ್ಸ್ ನವೆಂಬರ್ 20ರಂದು ಬರೆದ ಪ್ರವೇಶ ಪರೀಕ್ಷೆಯಲ್ಲಿ ದಿವ್ಯಾ ಹಿರೊಳ್ಳಿ ಶೇ 67.08 ಅಂಕ ಪಡೆದುಕೊಂಡು ಪ್ರಥಮ ರ‍್ಯಾಂಕ್ ಗಳಿಸಿದ್ದಾರೆ. ವಿಜಯಪುರ ಜಿಲ್ಲಾ ಸೆಷನ್ಸ್ ಕೋರ್ಟ್ ನಲ್ಲಿ ಹಿರಿಯ ವಕೀಲರಾಗಿರುವ ಅರವಿಂದ ಹಿರೊಳ್ಳಿ ಅವರ ಪುತ್ರಿಯಾಗಿರುವ ದಿವ್ಯಾ ಅವರು ಬಿ.ಎಲ್‌.ಡಿ.ಇ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವೈದ್ಯಕೀಯ ಪದವಿ (2012), ಹುಬ್ಬಳ್ಳಿ ಕಿಮ್ಸ್ ನಲ್ಲಿ ಎಂಡಿ(2016), ಪಾಂಡಿಚೇರಿಯ ಜಿಪ್‌ಮೇರ್ ನಲ್ಲಿ ಫೆಲೋಶಿಪ್ ಇನ್ ಕ್ರಿಟಿಕಲ್ ಕೇರ್ ಹಾಗೂ ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ ಫೆಲೊಶಿಪ್ ಇನ್ ನಿರೊ ಕ್ರಿಟಿಕಲ್ ಕೇರ್ ಪಡೆದುಕೊಂಡಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

LEAVE A REPLY

Please enter your comment!
Please enter your name here