ಯುಎಇಯಲ್ಲಿ ನಡೆಯಲಿರುವ ಡ್ರೀಮ್ 11 ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2020 ಯ ವೇಳಾಪಟ್ಟಿಯನ್ನು ಐಪಿಎಲ್ ಆಡಳಿತ ಮಂಡಳಿಯು ಭಾನುವಾರ ಪ್ರಕಟಿಸಿದೆ. ಈ ಋತುವು, ಸೆಪ್ಟೆಂಬರ್ 19 ರಂದು ಅಬುಧಾಬಿಯಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಪಂದ್ಯದೊಂದಿಗೆ ಭರ್ಜರಿಯಾಗಿ ಆರಂಭವಾಗಲಿದೆ.
ಶನಿವಾರ ಅಬುಧಾಬಿಯಲ್ಲಿ ಮೊದಲ ಪಂದ್ಯದ ನಂತರ, ದುಬೈ ತನ್ನ ಮೊದಲ ಪಂದ್ಯವನ್ನು ಭಾನುವಾರ ಆಯೋಜಿಸಲಿದ್ದು, ದೆಹಲಿ ಕ್ಯಾಪಿಟಲ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಸೆಣಸಲಿದ್ದು, ಸೋಮವಾರ ನಡೆಯುವ ಮೂರನೇ ಪಂದ್ಯವು ಸನ್ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ.
10 ದಿನ, ಎರಡು ಪಂದ್ಯಗಳು ನಡೆಯಲಿದ್ದು, ಮೊದಲ ಪಂದ್ಯ ಭಾರತೀಯ ಕಾಲಮಾನದಲ್ಲಿ ಮಧ್ಯಾಹ್ನ 3.30 ಕ್ಕೆ ಮತ್ತು ಎರಡನೇ ಪಂದ್ಯವು ಭಾರತೀಯ ಕಾಲಮಾನದಲ್ಲಿ ಸಂಜೆ 7.30 ಗೆ ಪ್ರಾರಂಭವಾಗಲಿದೆ. ಒಟ್ಟಾರೆಯಾಗಿ, ದುಬೈನಲ್ಲಿ 24, ಅಬುಧಾಬಿಯಲ್ಲಿ 20 ಮತ್ತು ಶಾರ್ಜಾದಲ್ಲಿ 12 ಪಂದ್ಯಗಳು ನಡೆಯಲಿವೆ.
ಪ್ಲೇಆಫ್ ಮತ್ತು ಡ್ರೀಮ್ 11 ಐಪಿಎಲ್ 2020 ಫೈನಲ್ ಪಂದ್ಯಗಳ ಸ್ಥಳಗಳನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಸಂಪೂರ್ಣ ವೇಳಾಪಟ್ಟಿಯನ್ನು ಇಲ್ಲಿ ನೋಡಿ