ನವದೆಹಲಿ: ದೇಶದಲ್ಲಿ ಕೊರೋನಾ ಹೆಚ್ಚುತ್ತಿರುವುದಕ್ಕೆ ಮಾಸ್ಕ್ ಧರಿಸದೇ, ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿರುವ ಜನರೇ ಕಾರಣ ಎಂದು ಭಾರತೀಯ ವೈದ್ಯಕೀಯ ಸಂಶೋಧನೆ ಮಂಡಳಿ ಮಂಗಳವಾರ ಹೇಳಿದೆ.
ಈ ಬಗ್ಗೆ ಮಾತನಾಡಿದ ಐಸಿಎಂಆರ್ ನಿರ್ದೇಶಕ ಬಲರಾಂ ಭಾರ್ಗವ ಅವರು, ದೇಶದಲ್ಲಿ ಕೊರೋನಾ ಸೋಂಕು ಪ್ರಮಾಣ ಹೆಚ್ಚುತ್ತಿದೆ. ಆದರೆ ಸೋಂಕು ಹೆಚ್ಚಳಕ್ಕೆ ಕೆಲವೇ ವ್ಯಕ್ತಿಗಳು ಕಾರಣ. ಮಾಸ್ಕ್ ಹಾಕದೆ, ಕೊರೊನಾ ಎಚ್ಚರಿಕೆಯ ಮಾರ್ಗಸೂಚಿಗಳನ್ನು ಪಾಲಿಸದೆ ಇರುವವರು ಸೋಂಕು ಹರಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದನ್ನೂ ಓದಿ : ಬೆಂಗಳೂರಿನಲ್ಲಿ ದೇಶದ ಮೊದಲ ಮೊಬೈಲ್ ಕೋವಿಡ್ ಲ್ಯಾಬ್
ಭಾರತದಲ್ಲಿ ಮೂರು ಕೊರೊನಾ ಲಸಿಕೆಗಳು ಕ್ಲಿನಿಕಲ್ ಟ್ರಯಲ್ ಹಂತದಲ್ಲಿವೆ. ಭಾರತ್ ಬಯೋಟೆಕ್ ಮತ್ತು ಝೈಡಸ್ ಕ್ಯಾಡಿಲಾ ಲಸಿಕೆಗಳು ಮೂರನೇ ಹಂತದಲ್ಲಿವೆ. ಸೀರಂ ಲಸಿಕೆ ಮೊದಲ ಹಂತ ಪೂರೈಸಿ ಎರಡನೇ ಹಂತದಲ್ಲಿದೆ ಎಂದು ಅವರು ಮಾಹಿತಿ ನೀಡಿದರು.
[…] […]