ಬೆಂಗಳೂರು: ಕಬ್ಬನ್ ಪಾರ್ಕ್ ನಲ್ಲಿ ಈವರೆಗೆ ವಾಯುವಿಹಾರಿಗಳಿಗೆ ಮಾತ್ರ ಪ್ರವೇಶಾವಕಾಶವಿತ್ತು. ಇದೀಗ ಸಾರ್ವಜನಿಕರಿಗೂ ಪ್ರವೇಶಾವಕಾಶ ಕಲ್ಪಿಸಲಾಗಿದೆ ಹಾಗೂ ಸರಕಾರದ ಆದೇಶದ ಮೇರೆಗೆ ಪಾರ್ಕ್ನಲ್ಲಿ ವಾಹನಗಳ ಸಂಚಾರವನ್ನು ಆರಂಭಿಸಲಾಗಿದೆ ಎಂದು ರಾಜ್ಯ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಜೆ. ಗುಣವಂತ ತಿಳಿಸಿದರು.
ಸಂಚಾರ ನಿರ್ಬಂಧ ಮುಂದುವರಿಕೆ ಕೋರಿ ಪಿಐಎಲ್
ಕಬ್ಬನ್ ಪಾರ್ಕ್ನಲ್ಲಿ ವಾಹನಗಳ ಸಂಚಾರ ನಿರ್ಬಂಧ ಮುಂದುವರಿಸುವಂತೆ ಕೋರಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ಕಬ್ಬನ್ ಪಾರ್ಕ್ ನಡಿಗೆದಾರರ ಸಂಘದ ಎಸ್.ಉಮೇಶ್ ಮತ್ತಿತರರು ಪಿಐಎಲ್ ಸಲ್ಲಿಸಿದ್ದು, ಅದು ಇನ್ನೂ ನ್ಯಾಯಪೀಠದ ಮುಂದೆ ವಿಚಾರಣೆಗೆ ಬರಬೇಕಿದೆ. ವಾಹನ ಸಂಚಾರದಿಂದ ಪರಿಸರದ ಮೇಲೆ ಹಾನಿಯಾಗಲಿರುವುದರಿಂದ, ಪಾರ್ಕ್ ಒಳಗಿನ ಶುದ್ಧ ಪರಿಸರ ಕಾಪಾಡುವ ದೃಷ್ಟಿಯಿಂದ ನಿರ್ಬಂಧ ಮುಂದುವರಿಸಲು ಮನವಿ ಮಾಡಲಾಗಿದೆ.