ಕೊರೋನಾ ಗೆದ್ದ 105 ವರ್ಷದ ಕಮಲಮ್ಮ – ಮನೆಯಲ್ಲಿಯೇ ಯಶಸ್ವಿ ಚಿಕಿತ್ಸೆ!

0
266
Tap to know MORE!

ಕೊಪ್ಪಳ: ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದರೂ ತಾಲೂಕಿನ ಕಾತರಕಿ ಗ್ರಾಮದ 105 ವರ್ಷದ ಕಮಲಮ್ಮ ಲಿಂಗನಗೌಡ ಹಿರೇಗೌಡ್ರ ಅವರು ಮನೆಯಲ್ಲಿಯೇ ಚಿಕಿತ್ಸೆ ಪಡೆದು ಕೊರೋನಾ ಗೆದ್ದು ಗುಣಮುಖರಾಗಿದ್ದಾರೆ.

ಜ್ವರ ಸೇರಿದಂತೆ ಮೊದಲಾದ ತೊಂದರೆ ಅನುಭವಿಸುತ್ತಿದ್ದ ಇವರನ್ನು ಕೋವಿಡ್‌ ಪರೀಕ್ಷೆ ಒಳಪಡಿಸಿದಾಗ ವರದಿಯಲ್ಲಿ ಪಾಸಿಟಿವ್‌ ಬಂದಿತ್ತು. ಉಳಿದಂತೆ ಯಾವುದೇ ತೊಂದರೆ ಇರಲಿಲ್ಲ. ಹೀಗಾಗಿ ಮನೆಯಲ್ಲಿಯೇ ಚಿಕಿತ್ಸೆ ಪಡೆದರು. ಒಂದು ವಾರ ಚಿಕಿತ್ಸೆ ಬಳಿಕ ಕೋವಿಡ್ ವರದಿ ನೆಗೆಟಿವ್ ಬಂದಿದೆ.

ಇದನ್ನೂ ನೋಡಿ: ಕೊರೋನಾ ಗೆದ್ದ 110 ವರ್ಷದ ಸಿದ್ದಮ್ಮ

ಕಳೆದ ವಾರವರಷ್ಟೇ, ಅವರ ಪುತ್ರ ಶಂಕರಗೌಡ ಅವರಿಗೆ ಕೋವಿಡ್ ಪಾಸಿಟಿವ್‌ ಬಂದಿರುವ ಹಿನ್ನೆಲೆಯಲ್ಲಿ ಅವರ ನಿವಾಸದಲ್ಲಿಯೇ ಹೋಮ್‌ ಐಸೋಲೇಶನ್‌‌ಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಕಮಲಮ್ಮ ಅವರಿಗೆ ಇತರೆ ಕಾಯಿಲೆಗಳು ಇರದೆ ಇರುವುದರಿಂದ ಆಸ್ಪತ್ರೆಗೆ ಹೋಗುವುದಕ್ಕೆ ಹಿಂದೇಟು ಹಾಕಿದ್ದರು. ಹೀಗಾಗಿ ಅವರಿಗೆ ಮನೆಯಲ್ಲೇ ಚಿಕಿತ್ಸೆ ನೀಡಲಾಯಿತು.

ಕಮಲಮ್ಮ ಅವರಿಗೆ ಚಿಕಿತ್ಸೆ ನೀಡಿದ ಡಾ| ಶ್ರೀನಿವಾಸ ಹ್ಯಾಟಿ ಅವರು, ನನ್ನ ವೃತ್ತಿ ಬದುಕಿನಲ್ಲಿ ಇದು ಸವಾಲು ಎನ್ನುವಂತೆ ಆಗಿತ್ತು. ಆದರೂ ಯಾವುದೇ ಕಾಯಿಲೆಗಳು ಇರದೆ ಇರುವುದರಿಂದ ಸಾಮಾನ್ಯ ಚಿಕಿತ್ಸೆ ನೀಡಲಾಗಿದೆ. ಈಗ ಅವರ ಕೋವಿಡ್‌ ವರದಿ ನೆಗಟಿವ್‌ ಬಂದಿದೆ. ನಿಜಕ್ಕೂ ಕೋವಿಡ್‌ಗೆ ಭಯ ಪಡುವವರು ಅಜ್ಜಿಯನ್ನು ನೋಡಿ ಕಲಿಯಬೇಕಾಗಿದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here