ಕರಾವಳಿಯಲ್ಲಿ ಜುಲೈ 14ರವರೆಗೆ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

0
78
Tap to know MORE!

ಬೆಂಗಳೂರು: ಬಂಗಾಲಕೊಲ್ಲಿಯ ಪಶ್ಚಿಮ ಮಧ್ಯಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದ್ದು, ಇದರ ಪ್ರಭಾವದಿಂದ ರಾಜ್ಯದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಜು. 14ರ ವರೆಗೆ ವ್ಯಾಪಕ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಮಿಳುನಾಡು ಬಿಜೆಪಿ ಉಪಾಧ್ಯಕ್ಷರಾಗಿದ್ದ ಅಣ್ಣಾಮಲೈ ಈಗ ಅಧ್ಯಕ್ಷರಾಗಿ ನೇಮಕ

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಜು. 11ರಂದು ರೆಡ್‌, ಜು. 12 ಮತ್ತು 13ರಂದು ಆರೆಂಜ್‌ ಹಾಗೂ ಜು. 14ರಂದು ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗುವ ಸಾಧ್ಯತೆಯಿದ್ದು, ಜು. 14ರ ವರೆಗೆ ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

LEAVE A REPLY

Please enter your comment!
Please enter your name here