ಸಂಪುಟ ವಿಸ್ತರಣೆ| ಎಂಟಿಬಿ ಸೇರಿದಂತೆ ಐವರಿಗೆ ಮಂತ್ರಿಗಿರಿ | ಕರಾವಳಿಗೆ ಮತ್ತೊಮ್ಮೆ ನಿರಾಸೆ?

0
188
Tap to know MORE!

ಬೆಂಗಳೂರು: ದೀರ್ಘಕಾಲದಿಂದ ಚರ್ಚೆಯಾಗುತ್ತಿರುವ ಸಂಪುಟ ವಿಸ್ತರಣೆ ಶೀಘ್ರದಲ್ಲೆ ನಡೆಯುವ ಸಾಧ್ಯತೆಯಿದೆ. ಐವರು ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಬಿಜೆಪಿ ಕೇಂದ್ರ ನಾಯಕರು ಅನುಮೋದನೆ ನೀಡಲಿದ್ದಾರೆ. ಈ ನಡುವೆ ಬಿಜೆಪಿಯ ಶಕ್ತಿ ಕೇಂದ್ರಗಳು ಎಂದೆನಿಸಿಕೊಂಡಿರುವ ಕರಾವಳಿ ಜಿಲ್ಲೆಗಳಿಗೆ ಮತ್ತೊಮ್ಮೆ ನಿರಾಸೆ ಆಗುವ ಸಾಧ್ಯತೆ ಇದೆ.

ಸಂಪುಟ ವಿಸ್ತರಣೆ ಜವಾಬ್ದಾರಿಯನ್ನು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಬಂದ್ ನಿಂದ ಆಗುವ ಆರ್ಥಿಕ ನಷ್ಟಕ್ಕೆ ಆಯೋಜಕರೇ ಹೊಣೆ : ಹೈಕೋರ್ಟ್

ಆರ್ .ಶಂಕರ್ (ಹಾವೇರಿ ಜಿಲ್ಲೆ), ಎಂಟಿಬಿ ನಾಗರಾಜ್ (ಬೆಂಗಳೂರು ಗ್ರಾಮಾಂತರ), ಮುನಿರತ್ನ (ಬೆಂಗಳೂರು) , ಉಮೇಶ್ ಕತ್ತಿ (ಬೆಳಗಾವಿ) ಮತ್ತು ಸಿಪಿ ಯೋಗೇಶ್ವರ್ (ರಾಮನಗರ) ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎಂದು ಉನ್ನತ ಮೂಲಗಳ ಮಾಹಿತಿ ತಿಳಿಸಿವೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಬಿಜೆಪಿ ಸರ್ಕಾರ ರಚನೆಯಾದಾಗಿನಿಂದಲೂ 8 ಬಾರಿ ಶಾಸಕರಾಗಿರುವ ಹುಕ್ಕೇರಿಯ ಉಮೇಶ್ ಕತ್ತಿ ನಿರಂತರವಾಗಿ ಲಾಬಿ ನಡೆಸುತ್ತಲೇ ಬಂದಿದ್ದಾರೆ, ಹೀಗಾಗಿ ಉಮೇಶ್ ಕತ್ತಿ ಅವರಿಗೆ ಸಚಿವ ಸ್ಥಾನ ಖಚಿತ ಎಂದು ಹೇಳಲಾಗುತ್ತಿದೆ. ಉಮೇಶ್ ಕತ್ತಿ ಅವರಿಗೆ ಸಚಿವ ಸ್ಥಾನ ನೀಡಿದರೆ ಬೆಳಗಾವಿ ಐವರು ಶಾಸಕರಿಗೆ ಸಚಿವ ಸ್ಥಾನ ದೊರಕಿದಂತಾಗುತ್ತದೆ.

ಶುಕ್ರವಾರ ನಡೆದ ಕೋರ್ ಕಮಿಟಿ ಸಭೆಯಲ್ಲಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸೇರಿದಂಕೆ 10 ಸದಸ್ಯರಸು ಭಾಗವಹಿಸಿದ್ದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಳಿನ್ ಕುಮಾರ್ ಕಟೀಲ್, ಜಗದೀಶ್ ಶೆಟ್ಟರ್, ಗೋವಿಂದ ಕಾರಜೋಳ, ಆರ್. ಅಶೋಕ, ಈಶ್ವರಪ್ಪ, ಸಿಟಿ ರವಿ ಹಾಗೂ ಅರವಿಂದ ಲಿಂಬಾವಳಿ ಪಾಲ್ಗೊಂಡಿದ್ದರು. ಕೇಂದ್ರ ಸಚಿವ ಸದಾನಂದಗೌಡ ಮತ್ತು ಸಿಎಂ ಉದಾಸಿ ಸಭೆಗೆ ಗೈರಾಗಿದ್ದರು.

LEAVE A REPLY

Please enter your comment!
Please enter your name here