ಕರಾವಳಿಯಲ್ಲಿ ಮುಂದುವರಿದ ಮಳೆ ಅಬ್ಬರ – ಜನಜೀವನ ಅಸ್ತವ್ಯಸ್ತ

0
184
Tap to know MORE!

ಮಂಗಳೂರು: ನಿರಂತರ ಮಳೆಯ ಪರಿಣಾಮ ಜಿಲ್ಲೆಯ ಹಲವು ಭಾಗದಲ್ಲಿ ಮನೆಯ ಗೋಡೆ ಕುಸಿತ, ಗುಡ್ಡ ಕುಸಿತ, ರಸ್ತೆ ಸಂಪರ್ಕ ಕಡಿತದ ಜತೆಗೆ 25ಕ್ಕೂ ಹೆಚ್ಚು ಮನೆಗಳಿಗೆ ಹಾನಿ, 40ಕ್ಕೂ ಹೆಚ್ಚು ಮಂದಿಯನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಏತನ್ಮಧ್ಯೆ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಬರಲು ಕಷ್ಟವಾಗಬಹುದೆಂದು ಮಂಗಳೂರು ವಿವಿ ಪರೀಕ್ಷೆ ಮುಂದೂಡಲಾಗಿದೆ.

ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ – ನೆರವು ನೀಡುವುದಾಗಿ ಸಿಎಂ ಭರವಸೆ

ಕಳೆದ 24 ಗಂಟೆಯಲ್ಲಿ ಮಂಗಳೂರಿನಲ್ಲಿ 8 ಮನೆಗಳು ಸಂಪೂರ್ಣ ಹಾನಿಗೊಂಡರೆ, 12 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಬಂಟ್ವಾಳದಲ್ಲಿ1 ಮನೆ ಪೂರ್ಣ ಹಾನಿಯಾದರೆ 2 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಕಡಬದಲ್ಲಿ 2 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಮಂಗಳೂರಿನ ಕಾಳಜಿ ಕೇಂದ್ರಕ್ಕೆ 40ಕ್ಕೂ ಹೆಚ್ಚು ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ ಎಂದು ಮಂಗಳೂರು ಕಂದಾಯ ಉಪವಿಭಾಗದ ಸಹಾಯಕ ಆಯುಕ್ತ ಮದನ್‌ ಮೋಹನ್‌ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here