ಬೆಂಗಳೂರು : ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ಮಸೂಧೆಗಳನ್ನು ವಿರುದ್ಧ ರೈತರ ಸಂಘಗಳು ಸಿಡಿದೆದ್ದಿವೆ. ಸರ್ಕಾರದಗಳ ರೈತವಿರೋಧಿ ಮಸೂದೆ ವಿರೋಧಿಸಿ, ಇದೇ ಸೆಪ್ಟೆಂಬರ್ 25ರ ಶುಕ್ರವಾರದಂದು ಕರ್ನಾಟಕ ಬಂದ್ ಗೆ ರೈತ ಸಂಘಟನೆಗಳು ಕರೆ ನೀಡಿವೆ. ಹೀಗಾಗಿ ಸೆ.25ರ ಶುಕ್ರವಾರದಂದು ಕರ್ನಾಟಕ ಬಂದ್ ಆಗಲಿದೆ ಎನ್ನಲಾಗುತ್ತಿದೆ.
ಬಂದ್ಗೆ 32ಕ್ಕೂ ಹೆಚ್ಚು ಸಂಘಟನೆಗಳು ಕೈಜೋಡಿಸಲಿವೆ. ರೈತ ಸಂಘಟನೆಗಳು ಮಾತ್ರವಲ್ಲದೇ ನಾರಾಯಣಗೌಡ ನೇತೃತ್ವದ ಕರವೇ, ಕಾರ್ಮಿಕ ಸಂಘಟನೆಗಳು, ದಲಿತ ಸಂಘಟನೆಗಳು, ಓಲಾ-ಉಬರ್, ಆಟೋ, ಟ್ಯಾಕ್ಸಿ ಸಂಘಟನೆಗಳು ಬೆಂಬಲ ಘೋಷಿಸಲಿವೆ. ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳನ್ನ ಬಂದ್ ಮಾಡಿ ಪ್ರತಿಭಟಿಸಲು ರೈತ ಸಂಘಟನೆಗಳು ತೀರ್ಮಾನಿಸಿವೆ.
ಬೆಂಗಳೂರಲ್ಲಿ ನಡೆಯುತ್ತಿರುವ ಪ್ರತಿಭಟನೆ 2ನೇ ದಿನಕ್ಕೆ ಕಾಲಿಟ್ಟಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ಮತ್ತು ಮೌರ್ಯ ಸರ್ಕಲ್ ಎದುರು ರೈತರು ಅಹೋರಾತ್ರಿ ಧರಣಿ ಮುಂದುವರೆಸಿದ್ದಾರೆ. ನಿನ್ನೆಯಿಂದ ವಿಧಾನಮಂಡಲದ ಅಧಿವೇಶನ ಆರಂಭ ಆಗಿದ್ದು, ಅಧಿವೇಶನದ ಮೊದಲ ದಿನವೇ ರಾಜಧಾನಿಯಲ್ಲಿ ರೈತರು ಹೋರಾಟಕ್ಕಿಳಿದಿದ್ದರು. ಈ ವೇಳೆ ಮಾತನಾಡಿದ್ದ ಕುರುಬೂರು ಶಾಂತಕುಮಾರ್, ಭೂಮಿ ತಾಯಿ ಮಾರಾಟಕ್ಕೆ ಮುಂದಾದ ಸರ್ಕಾರಕ್ಕೆ ತಕ್ಕ ಪಾಠ ಕಲಿಸ್ತೇವೆ. ದೇಶಾದ್ಯಂತ ರೈತರು ದಂಗೆ ಏಳುವ ಮುನ್ನ ಎಚ್ಚೆತುಕೊಳ್ಳಬೇಕು ಎಂದು ಎಚ್ಚರಿಕೆ ನೀಡಿದರು.
ರೈತ ಸಂಘಟನೆಗಳು ರೈತರ ವಿರೋಧಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಸೂಧೆ ಹಿಂತೆಗೆದುಕೊಳ್ಳುವಂತೆ ಆಗ್ರಹಿಸಿ, ಸೆ.25ರ ಶುಕ್ರವಾರದಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಇಂತಹ ರೈತ ಸಂಘಟನೆಗಳು ಕರೆ ನೀಡಿರುವಂತ ಕರ್ನಾಟಕ ಬಂದ್ ಗೆ ಅನೇಕ ರೈತ ಪರ ಸಂಘಟನೆಗಳು ಬೆಂಬಲಿಸಿವೆ ಎನ್ನಲಾಗಿದೆ. ಹೀಗಾಗಿ ಸೆಪ್ಟೆಂಬರ್ 25ರ ಶುಕ್ರವಾರದಂದು ಕರ್ನಾಟಕ ಬಂದ್ ಆಗಲಿದ್ಯಾ ಎನ್ನುವ ಬಗ್ಗೆ ಕಾದು ನೋಡಬೇಕಿದೆ.