ಮಂಗಳೂರು ಸೆ.20: ದೇಶಾದ್ಯಂತ ಕೃಷಿ ಮಸೂದೆಯ ವಿರುದ್ಧ ನಡೆಯುತ್ತಿರುವ ಭಾರೀ ಪ್ರತಿಭಟನೆ ಹಾಗೂ ಸೆ.28 ರಂದು ಘೋಷಿಸಿರುವ ಕರ್ನಾಟಕ ಬಂದ್ ಕಾರಣದಿಂದ ಪದವಿ ಕಾಲೇಜುಗಳ ಪರೀಕ್ಷೆ ನಡೆಸಲು ಅಡಚನೆಯುಂಟಾಗಲಿದ್ದು, ಸೆಪ್ಟೆಂಬರ್ 28 ರಂದು ನಡೆಯಲಿರುವ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಈ ಕುರಿತಂತೆ ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವ ಡಾ| ಪಿ.ಎಲ್.ಧರ್ಮ ಪ್ರಕಟಣೆ ಹೊರಡಿಸಿದ್ದು, “ಸೆ.21 ನಡೆಯಬೇಕಿದ್ದ ಮಂಗಳೂರು ವಿವಿಯ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು” ಎಂದು ತಿಳಿಸಿದ್ದಾರೆ.
ಬಂದ್ ಪರಿಣಾಮ, ಬಸ್ ಸಂಚಾರ ಇಲ್ಲದೆ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಬರಲು ತೊಂದರೆಯಾಗಬಹುದು. ಈ ನಿಟ್ಟಿನಲ್ಲಿ ಪರೀಕ್ಷೆ ನಡೆಸುವುದು ಕಷ್ಟವಾದ್ದರಿಂದ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.