BIG NEWS : ಡಿಸೆಂಬರ್ 5 ರಂದು ಕರ್ನಾಟಕ ಬಂದ್ ನಿಶ್ಚಿತ | ಬೆಂಗಳೂರು ಟೌನ್ ಹಾಲ್‌ನಿಂದ ಬೃಹತ್ ಜಾಥಾ

0
123
Tap to know MORE!

ಬೆಂಗಳೂರು, ನ 20: ಡಿಸೆಂಬರ್ 5ರಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಹಲವಾರು ಸಂಘಟನೆಗಳು ಬೆಂಬಲ ಘೋಷಣೆ ಮಾಡಿವೆ. ಕರ್ನಾಟಕ ಸರ್ಕಾರ ಮರಾಠಾ ಅಭಿವೃದ್ಧಿ ನಿಗಮ ರಚನೆ ಆದೇಶ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಬಂದ್ ಕರೆ ನೀಡಲಾಗಿದೆ.

ಶುಕ್ರವಾರ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಒಕ್ಕೂಟದ ಸಭೆ ನಡೆಯಿತು. ವಿವಿಧ ಸಂಘಟನೆಗಳು ಕರ್ನಾಟಕ ಬಂದ್‌ಗೆ ಬೆಂಬಲ ನೀಡಿದವು. ಡಿಸೆಂಬರ್ 5ರಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯ ತನಕ ಬಂದ್ ನಡೆಯಲಿದೆ.

ಇದನ್ನೂ ಓದಿ: ಬಳ್ಳಾರಿ ಜಿಲ್ಲೆ ವಿಭಜನೆ | ರಾಜ್ಯದ 31 ನೇ ಜಿಲ್ಲೆಯಾಗಿ ವಿಜಯನಗರ ಘೋಷಣೆ !

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಖಂಡಿಸಿ ಕರ್ನಾಟಕ ಬಂದ್ ಕರೆ
ಮಾಧ್ಯಮಗಳ ಜೊತೆ ಮಾತನಾಡಿದ ವಾಟಾಳ್ ನಾಗರಾಜ್, “ಡಿಸೆಂಬರ್ 5ರಂದು ಕರ್ನಾಟಕ ಬಂದ್ ಮಾಡುತ್ತೇವೆ. ಇದರಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ. ಬಂದ್ ನಡೆಸಲು ಒಕ್ಕೊರಲ ತೀರ್ಮಾನ ಮಾಡಲಾಗಿದೆ” ಎಂದು ಹೇಳಿದರು.

“ಕರ್ನಾಟಕ ಬಂದ್ ಮಾಡಬೇಡಿ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಬಾರದು. ಬಂದ್ ದಿನ ಯಾವುದೇ ವಾಹನ ಸಂಚಾರ ಇರುವುದಿಲ್ಲ. ಬೆಂಗಳೂರಿನಲ್ಲಿ ಟೌನ್‌ಹಾಲ್‌ನಿಂದ ಫ್ರೀಡಂ ಪಾರ್ಕ್‌ ತನಕ ಬೃಹತ್ ಜಾಥಾ ಮಾಡುತ್ತೇವೆ” ಎಂದು ವಾಟಾಳ್ ನಾಗರಾಜ್ ತಿಳಿಸಿದರು.

“ಕರ್ನಾಟಕ ಬಂದ್‌ಗೆ ಪ್ರತಿಯೊಬ್ಬರು ಬೆಂಬಲ ನೀಡಬೇಕು. ಹೋಟೆಲ್ ಮಾಲೀಕರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಬಂದ್‌ಗೆ ಸಂಪೂರ್ಣ ಬೆಂಬಲವನ್ನು ನೀಡಲಿವೆ” ಎಂದು ವಾಟಾಳ್ ನಾಗರಾಜ್ ಹೇಳಿದರು.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ‘ಮರಾಠ ಅಭಿವೃದ್ಧಿ ಪ್ರಾಧಿಕಾರ’ ರಚನೆ ಮಾಡಲು ಒಪ್ಪಿಗೆ ನೀಡಿರುವುದು ಚರ್ಚೆಗೆ ಕಾರಣವಾಗಿದೆ. ಸರ್ಕಾರದ ನಿರ್ಧಾರದ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.

LEAVE A REPLY

Please enter your comment!
Please enter your name here