ರಾಜ್ಯ ಪೋಲಿಸ್ ಇಲಾಖೆಯಲ್ಲಿ 387 ಸಿವಿಲ್ ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

0
1558
Tap to know MORE!

ನವದೆಹಲಿ: ಕರ್ನಾಟಕ ರಾಜ್ಯ ಪೊಲೀಸ್ (KSP) ಇಲಾಖೆಯಲ್ಲಿ ಖಾಲಿ ಇರುವ 387 ಸಿವಿಲ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ (Website)ನಲ್ಲಿ ನೀಡಲಾಗಿರುವ ಅಧಿಸೂಚನೆಯನ್ನು ಓದುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿದಾರರು KSPಯ http://rec21.ksp-online.in ಅಧಿಕೃತ ವೆಬ್‌ಸೈಟ್‌ನಲ್ಲಿ ಸೆಪ್ಟೆಂಬರ್ 6, 2021ರೊಳಗೆ ಈ ನೇಮಕಾತಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ ಸೆಪ್ಟೆಂಬರ್ 8, 2021 ಆಗಿದೆ. ಕೆಎಸ್‌ಪಿ ಪೊಲೀಸ್ ನೇಮಕಾತಿ(Karnataka State Police) 2021ಕ್ಕೆ ಅರ್ಜಿ ಸಲ್ಲಿಸುವ ಮುನ್ನ ಇತ್ತೀಚಿನ ಅಧಿಸೂಚನೆಯನ್ನು ಪರಿಶೀಲಿಸಲು ಅಭ್ಯರ್ಥಿಗಳಿಗೆ ಸೂಚಿಸಲಾಗಿದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಕೆಎಸ್‌ಪಿ ಕಾನ್ಸ್ಟೇಬಲ್ ನೇಮಕಾತಿ 2021: ಪ್ರಮುಖ ಮಾಹಿತಿ ಈ ಕೆಳಗಿನಂತಿದೆ

  • ಆನ್ಲೈನ್ ​​ಅರ್ಜಿ ಪ್ರಕ್ರಿಯೆಯ ಆರಂಭ ದಿನಾಂಕ – ಆಗಸ್ಟ್ 19, 2021
  • ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಕೊನೆಯ ದಿನಾಂಕ – ಸೆಪ್ಟೆಂಬರ್ 6, 2021
  • ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 8, 2021
  • ಪರೀಕ್ಷಾ ದಿನಾಂಕ – ಶೀಘ್ರದಲ್ಲೇ ಘೋಷಿಸಲಾಗುವುದು

ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಹೀಗಿದೆ

ಲಿಖಿತ ಪರೀಕ್ಷೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಯಲ್ಲಿ ಅಭ್ಯರ್ಥಿಗಳ ಸಾಧನೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅಭ್ಯರ್ಥಿಗಳ ವಯೋಮಿತಿ

ಅಭ್ಯರ್ಥಿಗಳು ಮೀಸಲಾತಿ ಇಲ್ಲದ ವರ್ಗಕ್ಕೆ 19 ರಿಂದ 31 ವರ್ಷ ಮತ್ತು ಮೀಸಲಾತಿ ವರ್ಗಕ್ಕೆ 19 ರಿಂದ 33 ವರ್ಷ ವಯೋಮಿತಿಯೊಳಗಿರಬೇಕು.

ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ

ಅಭ್ಯರ್ಥಿಗಳು ಪಿಯುಸಿ II (CBSE) ಅಥವಾ 12ನೇ ತರಗತಿ(12nd PUC) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಮಾನ್ಯತೆ ಪಡೆದ ಮಂಡಳಿಯಿಂದ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.

ಅರ್ಜಿ ಸಲ್ಲಿಸಿ: ಕರ್ನಾಟಕ ರಾಜ್ಯಪೋಲಿಸ್ ಸಿವಿಲ್ ಕಾನ್ಸ್ಟೇಬಲ್

LEAVE A REPLY

Please enter your comment!
Please enter your name here