ಮಂಗಳೂರು: ನಗರದ ಕಸಾಯಿಖಾನೆಗಳಿಗೆ ಮನಪಾ ತಂಡ ಭೇಟಿ

0
129
Tap to know MORE!

ಮಂಗಳೂರು: ನಗರದ ನಾನಾ‌ ಭಾಗಗಳಲ್ಲಿ ಕಾರ್ಯಾಚರಿಸುತ್ತಿರುವ ಕಸಾಯಿಖಾನೆಗಳಿಗೆ ಮನಪಾ ಮೇಯರ್ ದಿವಾಕರ್ ಪಾಂಡೇಶ್ವರ ನೇತೃತ್ವದ ತಂಡ ಭೇಟಿ ನೀಡಿ, ಪರಿಶೀಲನೆ‌ ನಡೆಸಿತು.

ಈ ಸಂಬಂಧ ಮಾಹಿತಿ ಹಂಚಿಕೊಂಡಿರುವ ಮೇಯರ್, ಮಂಗಳೂರು ಮಹಾನಗರ ಪಾಲಿಕೆಗೆ ಸಾರ್ವಜನಿಕರಿಂದ ಹಲವಾರು ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಮತ್ತು ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುವ ವಾಹನಗಳನ್ನು ಪೊಲೀಸರು ತಡೆಹಿಡಿದ ಘಟನೆಗಳನ್ನು ಪರಿಗಣಿಸಿ ಇಂದು ಮುಂಜಾನೆ ಉರ್ವಸ್ಟೋರ್, ಉರ್ವ ಮಾರ್ಕೆಟ್, ಕಸಾಯಿಖಾನೆ ಮುಂತಾದೆಡೆ ಮಾಂಸದ ಅಂಗಡಿಗಳಿಗೆ ಭೇಟಿ ಕೊಟ್ಟು ಪರಿಶೀಲಿಸಲಾಯಿತು ಎಂದಿದ್ದಾರೆ.

ಅಕ್ರಮ ಮಾರಾಟ, ಕಂಡುಬಂದಲ್ಲಿ ಪರವಾನಿಗೆ ರದ್ದು ಮಾಡುವ ಎಚ್ಚರಿಕೆ ಈಗಾಗಲೇ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ವೇಳೆ ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷರಾದ ಪೂರ್ಣಿಮಾ, ಕಿರಣ್ ಕುಮಾರ್, ಮ.ನ.ಪಾ. ಸದಸ್ಯರಾದ ಸುಧೀರ್ ಶೆಟ್ಟಿ, ಮ.ನ.ಪಾ. ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here