ಕಾಂಗ್ರೆಸ್ ಪಕ್ಷಕ್ಕೆ ಮತ್ತೊಮ್ಮೆ ರಾಹುಲ್ ಗಾಂಧಿ ಅಧ್ಯಕ್ಷ?

0
185
Tap to know MORE!

ನವದೆಹಲಿ ಡಿ.19: ಲೋಕಸಭೆ ಚುನಾವಣೆ ಸೋಲಿನ ಹೊಣೆ ಹೊತ್ತು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದರು. ಆ ಬಳಿಕ ಸೋನಿಯಾ ಗಾಂಧಿ ಅವರೇ ಎಐಸಿಸಿಗೆ ಮಧ್ಯಂತರ ಅಧ್ಯಕ್ಷರಾಗಿದ್ದಾರೆ. ಇದೀಗ ಮತ್ತೆ ಆ ಸ್ಥಾನವನ್ನು ಅಲಂಕರಿಸಲು ರಾಹುಲ್ ಗಾಂಧಿ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಸೋನಿಯಾ ಗಾಂಧಿ ಅವರಿಗೆ ಪಕ್ಷದ 23 ಮುಖಂಡರು ಪತ್ರ ಬರೆದಿದ್ದರು. ಇಂದು ಜಿ-23 ನಾಯಕರೊಂದಿಗೆ ಸೋನಿಯಾ ಗಾಂಧಿ ಅವರು ಸಭೆ ನಡೆಸಿದ್ದರು. ಈ ಸಭೆಯಲ್ಲಿ ಪಾಲ್ಗೊಂಡಿದ್ದ ರಾಹುಲ್ ಗಾಂಧಿ ಅವರು ಪರೋಕ್ಷವಾಗಿ ಅಧ್ಯಕ್ಷತೆ ಹುದ್ದೆ ಒಪ್ಪಿಕೊಳ್ಳುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಪಂಚಾಯತ್ ಚುನಾವಣೆ : ಒಂದು ದಿನ ವೇತನ ಸಹಿತ ರಜೆ ಘೋಷಿಸಿದ ರಾಜ್ಯ ಸರ್ಕಾರ

ಸಭೆಯಲ್ಲಿ ರಾಹುಲ್ ಗಾಂಧಿಯವರು ಮತ್ತೊಮ್ಮೆ ಎಐಸಿಸಿ ಅಧ್ಯಕ್ಷರಾಗಬೇಕೆಂಬ ಅಭಿಪ್ರಾಯವನ್ನು ನಾಯಕರು ವ್ಯಕ್ತಪಡಿಸಿದ್ದರು. ಹಿರಿಯ ನಾಯಕರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ. ಯಾವುದೇ ಜವಾಬ್ದಾರಿ ಹೊರಲು ಸಿದ್ಧ ಎಂದು ಹೇಳುವ ಮೂಲಕ ಅಧ್ಯಕ್ಷ ಗಾದಿ ಏರುವುದಾಗಿ ರಾಹುಲ್ ಗಾಂಧಿ ಪರೋಕ್ಷವಾಗಿ ಹೇಳಿದ್ದಾರೆ ಎಂದು ಕಾಂಗ್ರೆಸ್ ಹೈಕಮಾಂಡ್ ಮೂಲಗಳಿಂದ ಮಾಹಿತಿ ಸಿಕ್ಕಿದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

2019ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಹೀನಾಯವಾಗಿ ಸೋತಿತು. ಸೋಲಿನ ಜವಾಬ್ದಾರಿ ಹೊತ್ತು ರಾಹುಲ್ ಗಾಂಧಿ ಅವರು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ರಾಹುಲ್ ಗಾಂಧಿ ಅವರೇ ಮತ್ತೆ ಅಧ್ಯಕ್ಷರಾಗಿ ಮುಂದುವರೆಯಬೇಕು ಎಂದು ಯಾರು ಎಷ್ಟೇ ಬಲವಂತ ಮಾಡಿದ್ದರೂ ರಾಹುಲ್ ಗಾಂಧಿ ಅವರು ಮಾತ್ರ ಒಪ್ಪಿಕೊಂಡಿರಲಿಲ್ಲ. ಇದೀಗ ಮತ್ತೆ ಅಧ್ಯಕ್ಷರಾಗಲು ಹಸಿರು ನಿಶಾನೆ ತೋರಿದ್ದಾರೆ.

ಬೆಂಗಳೂರು : ಡೆತ್‌ನೋಟ್ ಬರೆದಿಟ್ಟು ಪೋಲೀಸ್ ದಂಪತಿ ಆತ್ಮಹತ್ಯೆ..!

LEAVE A REPLY

Please enter your comment!
Please enter your name here