ಕಾನೂನು ಪದವಿ ಪ್ರಥಮ ವರ್ಷದಿಂದ ನಾಲ್ಕು ವರ್ಷದ ವರೆಗಿನ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲು ನಿರ್ಧರಿಸಲಾಗಿದೆ. ಹಾಗೆಯೇ, ಅಂತಿಮ ವರ್ಷದ ಪರೀಕ್ಷೆಗಳನ್ನು ಅಕ್ಟೋಬರ್ನಲ್ಲಿ ನಡೆಸುತ್ತೇವೆ ಎಂದು ಕಾನೂನು ಸಚಿವ ಮಾಧುಸ್ವಾಮಿ ತಿಳಿಸಿದರು.
ಹೈಲೈಟ್ಸ್
● ಮಧ್ಯಂತರ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ತಾತ್ಕಾಲಿಕವಾಗಿ ಬಡ್ತಿ ನೀಡಲಾಗಿದೆ
● ಕಾಲೇಜು ತೆರೆದ ಬಳಿಕ ಅವರಿಗೆ ಪರೀಕ್ಷೆ ನಡೆಸಲಾಗುವುದು
● ಅಕ್ಟೋಬರ್ನಲ್ಲಿ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಆನ್ಲೈನ್ ಪರೀಕ್ಷೆ
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮಧ್ಯಂತರ ಸೆಮಿಸ್ಟರ್ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ಪ್ರಮೋಟ್ ಮಾಡುತ್ತೇವೆ. ಅವರ ಹಿಂದಿನ ಸೆಮಿಸ್ಟರ್ ಪರೀಕ್ಷೆಯ ನಿರ್ವಹಣೆ, ಆಂತರಿಕ ಮೌಲ್ಯಮಾಪನ ಆಧಾರದಲ್ಲಿ ವಿದ್ಯಾರ್ಥಿಗಳನ್ನು ಪ್ರೊಮೋಟ್ (ಕ್ಯಾರಿ ಓವರ್) ಮಾಡಲಾಗುತ್ತದೆ ಎಂದರು.
ಇದನ್ನೂ ನೋಡಿ : ಕೇಂದ್ರ ಸರ್ಕಾರಕ್ಕೆ ವಿದ್ಯಾರ್ಥಿಗಳ ಬಗ್ಗೆ ಕಾಳಜಿಯಿಲ್ಲ – ಸೋನಿಯಾ ಗಾಂಧಿ ವಾಗ್ದಾಳಿ
ವಿವಿ, ಕಾಲೇಜು ಪುನಾರಂಭವಾದ ಬಳಿಕ ಅವರಿಗೆ ಪಾಠ ನಡೆಸಿ, ಬಳಿಕ ಪರೀಕ್ಷೆಗೆ ದಿನಾಂಕ ನಿಗದಿ ಮಾಡುತ್ತೇವೆ. ಆ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉತ್ತೀರ್ಣರಾಗಬೇಕು. ಕೊನೆಯ ಸೆಮಿಸ್ಟರ್ ಪರೀಕ್ಷೆಯಲ್ಲಿ ಉತ್ತೀರ್ಣರಾದರೆ ಮಾತ್ರ ಅವರಿಗೆ ಡಿಗ್ರಿ ಸರ್ಟಿಫಿಕೇಟ್ ಸಿಗಲಿದೆ ಎಂದು ಸ್ಪಷ್ಟಪಡಿಸಿದರು.
ಅಂತಿಮ ವರ್ಷದ ಕಾನೂನು ಪದವಿ ಪರೀಕ್ಷೆಯನ್ನು ಆನ್ಲೈನ್ನಲ್ಲಿ ಮಾಡುವ ಬಗ್ಗೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ ಸೂಚಿಸಿತ್ತು. ಈ ಸಂಬಂಧ ಅಂತಿಮ ವರ್ಷದ ವಿದ್ಯಾರ್ಥಿಗಳ ಅಭಿಪ್ರಾಯ ಸಂಗ್ರಹ ಮಾಡಲಾಗಿತ್ತು.
ಆದರೆ, ಹಲವು ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಪರೀಕ್ಷೆ ಮಾಡುವುದು ಬೇಡ ಎಂದು ಅಭಿಪ್ರಾಯ ಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ ಕಾಲ ಮತ್ತು ಸಮಯಕ್ಕೆ ಅನುಗುಣವಾಗಿ ಆನ್ಲೈನ್ನಲ್ಲಿಯೇ ಪರೀಕ್ಷೆ ನಡೆಸುತ್ತೇವೆ ಎಂದು ಸಚಿವರು ತಿಳಿಸಿದರು.