ಕಾರ್ಕಳ ಶಾಸಕ ಸುನಿಲ್ ಕುಮಾರ್‌ಗೆ ಕೊರೋನಾ!

0
343
Tap to know MORE!

ಉಡುಪಿ: ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರಿಗೆ ಕೋವಿಡ್ ಪಾಸಿಟಿವ್ ದೃಢ ಪಟ್ಟಿದ್ದು ಈ ಕುರಿತು ಸ್ವತಃ ಶಾಸಕರೇ ಟ್ವೀಟ್ ಮಾಡಿ ವಿಷಯವನ್ನು ತಿಳಿಸಿದ್ದಾರೆ.

ಶಾಸಕ ಸುನಿಲ್ ಕುಮಾರ್ ಅವರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಶಾಸಕರು ತಮ್ಮ ಟ್ವಿಟರ್ ಖಾತೆಯಲ್ಲಿ ಸೋಂಕು ದೃಢಪಟ್ಟ ವಿಷಯವನ್ನು ಹೇಳಿಕೊಂಡಿದ್ದಾರೆ. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೈದರ ಬಳಿ ತಪಾಸಣೆ ಮಾಡಿಸಿದ್ದು, ಈ ವೇಳೆ ಕೋವಿಡ್ ಇರುವುದು ಗೊತ್ತಾಗಿದೆ ಎಂದಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಸದ್ಯ ವೈದ್ಯರ ಸಲಹೆಯಂತೆ ಕ್ವಾರಂಟೈನ್ ಆಗಿದ್ದೇನೆ, ತಮ್ಮ ಸಂಪರ್ಕಕ್ಕೆ ಬಂದವರು,ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಶಾಸಕರು ಟ್ವಿಟರ್ ನಲ್ಲಿ ವಿನಂತಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here