ಮುಖ್ಯಮಂತ್ರಿ ಯಡಿಯೂರಪ್ಪರವರ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆಗೆ ಯತ್ನ!

0
131
Tap to know MORE!

ಬೆಂಗಳೂರು: ಸಿಎಂ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್. ಆರ್. ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಿದ್ರೆ ಮಾತ್ರೆ ಸೇವಿಸಿ ಸಂತೋಷ್ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ಕೌಟುಂಬಿಕ ಕಾರಣಗಳಿಂದಾಗಿ ಸಂತೋಷ್ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಅಸ್ವಸ್ಥರಾಗಿದ್ದ ಸಂತೋಷ್ ಅವರನ್ನು ಎಂ. ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದನ್ನೂ ಓದಿ: ಕರ್ನಾಟಕ ಬಂದ್| “ವಿನಾಕಾರಣ ಬಂದ್ ಮಾಡಿದ್ರೆ ಕಠಿಣ ಕ್ರಮ” : ಸಿಎಂ ಯಡಿಯೂರಪ್ಪ

ಅಸ್ವಸ್ಥರಾಗಿದ್ದ ಸಂತೋಷ್ ಅವರನ್ನು ಸಿಎಂ ಬಿ. ಎಸ್. ಯಡಿಯೂರಪ್ಪ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಮಾತನಾಡಿದ ಅವರು, ಸಂತೋಷ್ ಕುಟುಂಬದವರ ಜೊತೆ ಈ ಸಂಬಂಧ ಚರ್ಚಿಸೋದಾಗಿ ತಿಳಿಸಿದ್ದಾರೆ.

ಸದ್ಯ ಸಂತೋಷ್ ಅವರ ಆರೋಗ್ಯ ಸ್ಥಿತಿ ಸುಧಾರಿಸಿದೆ. ಅವರಿಗೆ ಎಂ. ಎಸ್. ರಾಮಯ್ಯ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿದೆ. ಆಸ್ಪತ್ರೆಗೆ ದಾಖಲಿಸಿದ ವೇಳೆ ಸಂತೋಷ್‌ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here