ಕಾಲೇಜಿಗೆ ತೆರಳಲು ವಿದ್ಯಾರ್ಥಿಗಳಲ್ಲಿ ಉತ್ಸಾಹ!

0
107

ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಕರ್ನಾಟಕದಲ್ಲಿ ಪ್ರಥಮ ಪಿಯುಸಿ ಮತ್ತು ಪದವಿ ತರಗತಿಗಳ ಪ್ರವೇಶ ಪ್ರಕ್ರಿಯೆಗಳು ಭರದಿಂದ ಸಾಗುತ್ತಿದೆ. ಕಳೆದ ಐದು ತಿಂಗಳಿಂದ ಮನೆಯಲ್ಲಿದ್ದ ವಿದ್ಯಾರ್ಥಿಗಳು, ಕಾಲೇಜು ಸೇರಲು ಉತ್ಸುಕರಾಗಿದ್ದಾರೆ.

ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು ಉತ್ಸುಕರಾಗಿದ್ದಾರೆ. ಕೊರೊನಾ ಭೀತಿಯಲ್ಲೂ, ಜನರು ಹೊರಬಂದು ಮುಖ್ಯವಾಹಿನಿಯಲ್ಲಿ ಬೆರೆಯುತ್ತಿದ್ದಾರೆ. ಆದ್ದರಿಂದ ಸೆಪ್ಟೆಂಬರ್‌ನಿಂದ ಪಿಯುಸಿ, ಪದವಿ, ಎಂಜಿನಿಯರಿಂಗ್‌ ಇತ್ಯಾದಿ ಕೋರ್ಸ್‌ಗಳ ತರಗತಿಗಳನ್ನು ಆರಂಭಿಸುವುದು ಸೂಕ್ತ ಅಭಿಪ್ರಾಯ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಣ ಸಂಸ್ಥೆಗಳಿಂದ ಕೇಳಿಬರುತ್ತಿದೆ.

ಈಗಾಗಲೇ ಶಾಲಾ, ಕಾಲೇಜುಗಳ ಶೈಕ್ಷಣಿಕ ವರ್ಷದ ಆರಂಭ ತೀರ ವಿಳಂಬವಾಗಿದ್ದು, ಇದು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಉಂಟುಮಾಡಬಹುದು. ಆದ್ದರಿಂದ ಅತ್ಯಂತ ಸುರಕ್ಷಿತ ಕ್ರಮಗಳೊಂದಿಗೆ ಮೊದಲು ಕಾಲೇಜುಗಳು ಆರಂಭವಾಗಲಿ ಎಂಬ ಸಲಹೆ ಕೇಳಿ ಬರುತ್ತಿದೆ.

LEAVE A REPLY

Please enter your comment!
Please enter your name here